ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಗರ್ಲ್ ಫ್ರೆಂಡ್ ಜೊತೆ ಸಲುಗೆ; ಸ್ನೇಹಿತನನ್ನು ಕೊಂದ ಆಫ್ರಿಕಾ ಪ್ರಜೆ ಬಂಧನ

ಗರ್ಲ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದ ತನ್ನ ಆಪ್ತ ಸ್ನೇಹಿತನನ್ನೇ ಕೊಂದಿದ್ದ ಆಫ್ರಿಕನ್ ಪ್ರಜೆಯನ್ನು ಅಮೃತ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಗರ್ಲ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದ ತನ್ನ ಆಪ್ತ ಸ್ನೇಹಿತನನ್ನೇ ಕೊಂದಿದ್ದ ಆಫ್ರಿಕನ್ ಪ್ರಜೆಯನ್ನು ಅಮೃತ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಫ್ರಿಕಾದ ಅಸೋಲೋಮನ್ ಎಕೆನೆ (35) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಓಬಿವರಾ (26) ನನ್ನು ಪೊಲೀಸರು ಬಂಧಿಸಿದ್ದಾರೆ.

‘ಅಸೋಲೋಮನ್ ಹಾಗೂ ಆರೋಪಿ ಓಬಿವರಾ ಆಫ್ರಿಕಾ ಪ್ರಜೆಗಳು. ವ್ಯಾಪಾರ ವೀಸಾದಡಿ ನಗರಕ್ಕೆ ಬಂದಿದ್ದ ಇವರು ಪ್ರತ್ಯೇಕವಾಗಿ ನೆಲೆಸಿದ್ದರು. ಯುವತಿ ವಿಚಾರವಾಗಿ ಇಬ್ಬರ ಮಧ್ಯೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಓಬಿವರಾ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ, ಇಬ್ಬರು ದಾಸರಹಳ್ಳಿಯ ಮುನಿಕೆಂಪಣ್ಣ ಬಡಾವಣೆಯ ಬಹುಮಹಡಿ ಕಟ್ಟಡವೊಂದರ ಎರಡನೇ ಮಹಡಿಯಲ್ಲಿರುವ ಬಾಡಿಗೆ ಮನೆಯಲ್ಲಿ  ಲಿವಿಂಗ್ ಟುಗೆದರ್ ರಿಲೇಷನ್ ಶಿಪ್ ನಲ್ಲಿದ್ದರು. ಆರೋಪಿ ಜೊತೆಗೆ ಲಿವಿಂಗ್ ರಿಲೇಷನ್ ನಲ್ಲಿ ಇರುವುದಕ್ಕೂ ಮುನ್ನ ಆಕೆ ಮೃತ ವ್ಯಕ್ತಿ ಜೊತೆ ಆತ್ಮೀಯವಾಗಿದ್ದಳು.

ಯುವತಿ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು, ಇದರಿಂದ ಬೇಸತ್ತ ಆಕೆ ಸ್ವಲ್ಪ ಕಾಲ ವಿಕ್ಟರ್ ನಿಂದ ದೂರಾಗಿದ್ದಳು, ಇತ್ತೀಚೆಗಷ್ಟೆ ಮತ್ತೆ ಆಕೆಯ ಜೊತೆ ವಾಸವಿದ್ದಳು. ಮತ್ತೆ ಅಸೋಲೋಮನ್ ಎಕೆನೆ ಯುವತಿಯನ್ನು ಭೇಟಿ ಮಾಡಲು ಮನೆಗೆ ಬಂದಿದ್ದ.

ಇದರಿಂದ ಕುಪಿತಗೊಂಡ ಆರೋಪಿ ಚಾಕುವಿನಿಂದ ಇರಿದು ಆತನನ್ನು ಕೊಂದು ಪರಾರಿಯಾಗಿದ್ದ. ಸ್ನೇಹಿತನ ಮನೆಯಲ್ಲಿ ಆಶ್ರಯ ಪಡೆದಿದ್ದ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT