ವಿಧಾನಸೌಧ 
ರಾಜ್ಯ

ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ, ನವೆಂಬರ್ 1 ರಿಂದ ನೋಂದಣಿ ಆರಂಭ

ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.

ಬೆಂಗಳೂರು: ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.

ಯಶಸ್ವಿನಿ ಯೋಜನೆಗಾಗಿ ರೈತರು ಹಾಗೂ  ಸಹಕಾರಿ ಸಂಘಗಳು ಬೇಡಿಕೆ ಮುಂದಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಯಶಸ್ವಿನಿ ಯೋಜನೆ ಅಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸೆ ವೆಚ್ಚ 5 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ. 4 ಸದಸ್ಯರ ಕುಟುಂಬಕ್ಕೆ ವರ್ಷಕ್ಕೆ 500 ರೂಪಾಯಿ ವಂತಿಕೆ ಕಟ್ಟಬೇಕಾಗಿದೆ.

ನೊಂದಣಿ ಪ್ರಕ್ರಿಯೆಯನ್ನು ನವೆಂಬರ್ 1, 2022 ರಿಂದ ಪ್ರಾರಂಭವಾಗಲಿದೆ. ಯಶಸ್ವಿ ಯೋಜನೆ ಅವಧಿ 01-01-2023 ರಿಂದ 30-12-2023 ರವರೆಗೂ ಜಾರಿಯಲ್ಲಿರುತ್ತದೆ. 1650 ಖಾಯಿಲೆಗಳಿಗೆ ಈ ಯೋಜನೆ ಅಡಿ ಚಿಕಿತ್ಸೆ ನೀಡಲಾಗುತ್ತದೆ.

ಮಾರ್ಗಸೂಚಿ ಪ್ರಕಾರ, ಸಹಕಾರ ಸಂಘಗಳ ಸದಸ್ಯರು, ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರು, ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು, ಸಹಕಾರಿ ನೇಕಾರರಿಗೆ ಈ ಯೋಜನೆ ಅನ್ವಯವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT