ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 110 ಸೇರಿ ರಾಜ್ಯದಲ್ಲಿ 181 ಮಂದಿಗೆ ಪಾಸಿಟಿವ್; ಮೂವರು ಸಾವು

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 181 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,66,357ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,259ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 110 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,72,841ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 127 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,23,167ಕ್ಕೆ ಏರಿಕೆಯಾಗಿದೆ. ಇನ್ನು 2,899 ಸಕ್ರಿಯ ಪ್ರಕರಣಗಳಿವೆ.

SCROLL FOR NEXT