ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: 5 ವರ್ಷದ ಬಾಲಕನಿಗೆ ಮಂಗನ ಕಾಯಿಲೆಯ ಲಕ್ಷಣಗಳು; ಪರೀಕ್ಷೆಗೆ ಮಾದರಿ ರವಾನೆ

ಕೆ.ಆರ್.ನಗರದಲ್ಲಿ ಐದು ವರ್ಷದ ಬಾಲಕನಲ್ಲಿ ಮಂಗನ ಕಾಯಿಲೆ ಲಕ್ಷಣಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಮೈಸೂರು: ಕೆ.ಆರ್.ನಗರದಲ್ಲಿ ಐದು ವರ್ಷದ ಬಾಲಕನಲ್ಲಿ ಮಂಗನ ಕಾಯಿಲೆ ಲಕ್ಷಣಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ವರದಿಯಾಗುತ್ತಿರುವ ಮೊದಲ ಶಂಕಿತ ಪ್ರಕರಣ ಇದಾಗಿದೆ. ಆರೋಗ್ಯಾಧಿಕಾರಿಗಳು ಗ್ರಾಮಕ್ಕೆ ತೆರಳಿ ಮಗುವಿನ ಮೇಲೆ ನಿಗಾ ಇರಿಸಿದ್ದಾರೆ. ಆರೋಗ್ಯ ಸಿಬ್ಬಂದಿ ಮಾದರಿ ಸಂಗ್ರಹಿಸಿ, ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

5 ವರ್ಷದ ಬಾಲಕನಿಗೆ ಜ್ವರ ಬಂದಿತ್ತು, ಜ್ವರಕ್ಕೆ ಚಿಕಿತ್ಸೆ ಕೊಡಿಸಲು ಪೋಷಕರು ಮಗುವನ್ನು ಮೈಸೂರಿನ ಖಾಸಗಿ ಕ್ಲಿನಿಕ್‌ಗೆ ಕರೆದೊಯ್ದಿದ್ದಾರೆ. ಆದರೆ ಮಗುವಿನ ಮೇಲೆ ಚರ್ಮದ ಗುಳ್ಳೆಗಳನ್ನು ಗಮನಿಸಿದ ವೈದ್ಯರು ಜಿಲ್ಲಾ ಆರೋಗ್ಯಾಧಿಕಾರಿ ಕೆ ಎಚ್ ಪ್ರಸಾದ್ ಅವರಿಗೆ ಮಾಹಿತಿ ನೀಡಿದ್ದಾರೆ.  ಅವರು ಕ್ಲಿನಿಕ್‌ಗೆ ತೆರಳಿ ಮಗುವನ್ನು ಅಬ್ಸರ್ ವೇಷನ್ ನಲ್ಲಿರಿಸಿದ್ದಾರೆ.

ಮಗುವಿನ ದೇಹದಲ್ಲಿ ದದ್ದುಗಳು ಮತ್ತು ಹುಣ್ಣುಗಳು ಕಂಡುಬಂದಿವೆ ಎಂದು ಡಿಎಚ್‌ಒ ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದರು. ಜಿಲ್ಲಾ ಆರೋಗ್ಯ ಇಲಾಖೆ ಸೋಂಕಿನ ಮೂಲ ಪತ್ತೆ ಹಚ್ಚುತ್ತಿದ್ದು, ಸೋಂಕು ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದರು.

ಜುಲೈನಲ್ಲಿ ಕೇರಳದಲ್ಲಿ ಮೊದಲ ಮಂಗನ ಕಾಯಿಲೆ ಪ್ರಕರಣ ವರದಿಯಾಗಿತ್ತು. ಇಲ್ಲಿಯವರೆಗೆ, 10 ಮಂಕಿ ಪಾಕ್ಸ್  ಪ್ರಕರಣಗಳು ವರದಿಯಾಗಿವೆ, ನವದೆಹಲಿಯಿಂದ ಮೂರು ಪುರುಷರು ಮತ್ತು ಇಬ್ಬರು ಮಹಿಳೆಯರು ಮತ್ತು ಯುಎಇಯಿಂದ ಭಾರತಕ್ಕೆ ಆಗಮಿಸಿದ ಕೇರಳದ ಐದು ಪುರುಷರಲ್ಲಿ ಮಂಕಿ ಫಾಕ್ಸ್ ಕಾಣಿಸಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT