ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 116 ಸೇರಿ ರಾಜ್ಯದಲ್ಲಿ 185 ಮಂದಿಗೆ ಪಾಸಿಟಿವ್; ಒಂದು ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 185 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,66,542ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಂದು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,250ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 116 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,72,957ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 133 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,23,300ಕ್ಕೆ ಏರಿಕೆಯಾಗಿದೆ. ಇನ್ನು 2,950 ಸಕ್ರಿಯ ಪ್ರಕರಣಗಳಿವೆ.

SCROLL FOR NEXT