ರಾಜ್ಯ

2ಎ ಮೀಸಲಾತಿಗೆ ಒತ್ತಾಯಿಸಿ ಅಕ್ಟೋಬರ್ 21 ರಂದು ಹುಕ್ಕೇರಿಯಲ್ಲಿ ಬೃಹತ್ ಪಂಚಮಸಾಲಿ ಸಮಾವೇಶ

Shilpa D

ಬೆಂಗಳೂರು: ಅಕ್ಟೋಬರ್ 21ರೊಳಗೆ ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ನಿರ್ಧಾರವನ್ನು ಸರ್ಕಾರ ಪ್ರಕಟಿಸಬೇಕು ಎಂದು ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಾಡುತ್ತಿರುವ ಹೋರಾಟ 2 ವರ್ಷ ತಲುಪಿದೆ. ಆದರೂ ಸರ್ಕಾರ ಯಾವುದೇ ತೀರ್ಮಾನ ನೀಡದೆ ಸುಮ್ಮನಾಗಿದೆ ಎಂದು ಕಿಡಿಕಾರಿದರು.

ಇನ್ನು ಹುಕ್ಕೇರಿಯಲ್ಲಿ ಅ.21 ರಂದು ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ ನಡೆಯಲಿದೆ. ಅಷ್ಟರೊಳಗೆ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ಕೊಡುವ ಸಂಬಂಧ ಅಂತಿಮ ತೀರ್ಮಾನ ಕೈಗೊಳ್ಳಬೇಕು. ಇಲ್ಲದೆ ಇದ್ದರೆ ಹುಕ್ಕೇರಿ ಸಮಾವೇಶದಲ್ಲಿ ವಿಧಾನಸೌಧ ಮುತ್ತಿಗೆಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಅಲ್ಪಸಂಖ್ಯಾತರ ಮೀಸಲಾತಿ ಕಿತ್ತು ನಮಗೆ ಕೊಡುವುದು ಬೇಡ ಹುಕ್ಕೇರಿ ಪಂಚಮಸಾಲಿ ಸಮಾವೇಶಕ್ಕೂ ಮೊದಲು ನಿಲುವು ತಿಳಿಸಬೇಕು. ಈಗಾಗಲೇ ಸರ್ಕಾರ ಲಿಂಗಾಯತ ಸಮುದಾಯದ 21 ಉಪಪಂಗಡಗಳಿಗೆ 2 ಎ ಮೀಸಲಾತಿ ಸ್ಥಾನ ನೀಡಿದೆ. ಅದೇ ರೀತಿಯಲ್ಲಿ ಸರ್ಕಾರ ನಮ್ಮ ಸಮುದಾಯಕ್ಕೂ ನೀಡಲಿ ಎಂಬುವುದು ನಮ್ಮ ಹಕ್ಕೊತ್ತಾಯವಾಗಿದೆ ಎಂದರು.

SCROLL FOR NEXT