ಸಾಂದರ್ಭಿಕ ಚಿತ್ರ 
ರಾಜ್ಯ

ಪುಣ್ಯಕೋಟಿ ದತ್ತು ಯೋಜನೆ: ಸರ್ಕಾರಿ ನೌಕರರಿಂದ 80 ಕೋಟಿ ರೂ. ದೇಣಿಗೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿಗೆ ಸ್ಪಂದಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 'ಪುಣ್ಯಕೋಟಿ ದತ್ತು ಯೋಜನೆ' ಒಟ್ಟು 80ಕೋಟಿ ರೂ. ದೇಣಿಗೆ ನೀಡಲು ಮುಂದಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿಗೆ ಸ್ಪಂದಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 'ಪುಣ್ಯಕೋಟಿ ದತ್ತು ಯೋಜನೆ' ಒಟ್ಟು 80ಕೋಟಿ ರೂ. ದೇಣಿಗೆ ನೀಡಲು ಮುಂದಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು. ಈ ವೇಳೆ ರಾಜ್ಯ ಸರ್ಕಾರದ 'ಪುಣ್ಯಕೋಟಿ ದತ್ತು ಯೋಜನೆ'ಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಇತರ ಸಂಸ್ಥೆಗಳ ನೌಕರರು ದೇಣಿಗೆ ನೀಡಲು ಸಮ್ಮತಿಸಿರುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಜತೆಗೆ ದೇಣಿಗೆ ನೀಡುವ ಕುರಿತು ಸಮ್ಮತಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಸಮಾರಂಭವೊಂದರಲ್ಲಿ ದೇಣಿಗೆ ಕುರಿತು ಮನವಿ ಮಾಡಿದ್ದರು. ಈ ಮನವಿಗೆ ಸದ್ಯ ಸ್ಪಂದಿಸಿದ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರು ಮತ್ತು ಸರ್ಕಾರದ ಇತರ ಸಂಸ್ಥೆಗಳ ನೌಕರರು ಸ್ವ-ಇಚ್ಛೆಯಿಂದ ದೇಣಿಗೆ ನೀಡಲು ಮುಂದಾಗಿದ್ದಾರೆ.

ಗ್ರೂಪ್ ಎ ಅಧಿಕಾರಿಗಳು ತಲಾ 11,000 ರೂಪಾಯಿ ದೇಣಿಗೆ ನೀಡುತ್ತಿದ್ದರೆ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಅಧಿಕಾರಿಗಳು ಕ್ರಮವಾಗಿ 4,000 ಮತ್ತು 400 ರೂ. ದೇಣಿಗೆ ನೀಡುತ್ತಿದ್ದಾರೆ. ಈ ಮೊತ್ತವನ್ನು ತಮ್ಮ ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಸಂಬಳದಿಂದ ಕಡಿತಗೊಳಿಸುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನೌಕರರ ಕೊಡುಗೆ 80 ರಿಂದ 100 ಕೋಟಿ ರೂ. ನೌಕರರ ನಿರ್ಧಾರವನ್ನು ಶ್ಲಾಘಿಸಿದ ಸಿಎಂ, ಸರ್ಕಾರ ನಡೆಸುತ್ತಿರುವ ಗೋಶಾಲೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಗೋವುಗಳಿಗೆ ಆಶ್ರಯ ನೀಡಲಾಗಿದೆ. 

ಪ್ರವಾಹ ಮತ್ತು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅವರ ಕೆಲಸವನ್ನು ಶ್ಲಾಘಿಸಿದರು.  ವೇತನ ಪರಿಷ್ಕರಣೆಗಾಗಿ ನೌಕರರ ಬೇಡಿಕೆಯನ್ನು ಪರಿಶೀಲಿಸಲು ಸರ್ಕಾರವು ಅಕ್ಟೋಬರ್‌ನಲ್ಲಿ ವೇತನ ಆಯೋಗವನ್ನು ರಚಿಸುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT