ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನ ಶುರುವಾದ ಮಳೆ ತಡರಾತ್ರಿವರೆಗೂ ಅಲ್ಲಲ್ಲಿ ಸುರಿಯುತ್ತಲೇ ಇತ್ತು. ಇದರಿಂದಾಗಿ ಬೆಂಗಳೂರು ಜನಜೀವನ ಅಸ್ತವ್ಯಸ್ತವಾಗಿತ್ತು.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನ ಶುರುವಾದ ಮಳೆ ತಡರಾತ್ರಿವರೆಗೂ ಅಲ್ಲಲ್ಲಿ ಸುರಿಯುತ್ತಲೇ ಇತ್ತು. ಇದರಿಂದಾಗಿ ಬೆಂಗಳೂರು ಜನಜೀವನ ಅಸ್ತವ್ಯಸ್ತವಾಗಿತ್ತು.

ಇಂದು ಕೂಡ ರಾಜಧಾನಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ ಜನರು ಪರದಾಡುವಂತಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಬೆಂಗಳೂರಿನಲ್ಲಿ ಇನ್ನೂ ಐದು ದಿನ ಮಳೆ ಆಗಲಿದೆ. ರಾಜಾಕಾಲುವೆ ಅಕ್ಕಪಕ್ಕದ ಮತ್ತು ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. 

25 ಜಿಲ್ಲೆಗಳಿಗೆ ಎಚ್ಚರಿಕೆ: ರಾಜ್ಯದ 25 ಜಿಲ್ಲೆಗಳಿಗೆ ಮಳೆ ಅಲರ್ಟ್​ ನೀಡಲಾಗಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರಮ, ರಾಮನಗರದಲ್ಲಿ ಭಾರೀ ಮಳೆಯಾಗಿದೆ.  ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲೂ ಮಳೆಯಾಗಿದ್ದು, ಮಲೆನಾಡು ಜಿಲ್ಲೆಗಳಲ್ಲೂ  ಮಳೆ ಸುರಿಯುತ್ತಿದೆ.

ಬೆಂಗಳೂರಿನ ಜನರು ಇನ್ನೂ 3 ದಿನಗಳ ಕಾಲ ಮಳೆ ಕಾಟವನ್ನು ಅನುಭವಿಸಬೇಕಾಗುತ್ತದೆ. ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಅ. 18ರಂದು ಕರಾವಳಿಗೆ ಕೂಡ ಹಳದಿ ಅಲರ್ಟ್ ನೀಡಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 18ರವರೆಗೆ ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT