ರಾಜ್ಯ

ಸಿದ್ಧಾಪುರದಲ್ಲಿ ಭೂ ಡಿನೋಟಿಫಿಕೇಷನ್: ಬಿಜೆಪಿ ಆರೋಪ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ- ಸಿದ್ದರಾಮಯ್ಯ

Nagaraja AB

ಬೆಂಗಳೂರು: ಲಾಲ್‌ಬಾಗ್ ಸಿದ್ಧಾಪುರ ಗ್ರಾಮದಲ್ಲಿ 2 ಎಕರೆ 39.5 ಗುಂಟೆ ಜಮೀನನ್ನು ಡಿನೋಟಿಫಿಕೇಷನ್/ರೀಡೂ ಮಾಡಿದ್ದೇನೆ ಎಂಬ ಬಿಜೆಪಿ ಆರೋಪ ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಲಾಲ್‌ಬಾಗ್ ಸಿದ್ಧಾಪುರದ ಜಮೀನುಗಳ ಕುರಿತ ಸುಳ್ಳಿನ ಕಂತೆಗಳ ಮೂಲಕ ತನ್ನ ಚಾರಿತ್ರ್ಯಹನನ ಮಾಡಲು ಪ್ರಯತ್ನಿಸುತ್ತಿರುವ ಬಿಜೆಪಿಯ ಮರಿನಾಯಕನ ವಿರುದ್ಧ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 ಭೂ ಹಗರಣಗಳನ್ನು ಬಯಲಿಗೆಳೆಯುವ ಪ್ರಾಮಾಣಿಕವಾದ ಉದ್ದೇಶವನ್ನು ರಾಜ್ಯ  ಸರ್ಕಾರ ಹೊಂದಿದ್ದರೆ 2008 ರಿಂದ ಇದುವರೆಗೆ ಬೆಂಗಳೂರು ಮತ್ತು ರಾಜ್ಯದ ಬೇರೆ ನಗರಗಳಲ್ಲಿನ ಜಮೀನು ಉಪಯೋಗ ಬದಲಾವಣೆಯ ಪ್ರತಿ ಪ್ರಕರಣದ ಮಾಹಿತಿಯನ್ನೂ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. 

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ 3 ತಿಂಗಳಾಯಿತು. ಆದರೆ ಇದುವರೆಗೂ ಕೂಡ ಸಿ.ಡಿ.ಪಿ ಗೆ ಅನುಮೋದನೆ ನೀಡಿಲ್ಲ. ಸಿ.ಡಿ.ಪಿ ಯನ್ನು ಅಂತಿಮಗೊಳಿಸದ ಕಾರಣ ನಗರದ ಬೆಳವಣಿಗೆ ಅಡ್ಡಾದಿಡ್ಡಿಯಾಗಿದೆ. ಆದ್ದರಿಂದ ಕೂಡಲೆ ಸಿ.ಡಿ.ಪಿ ಯನ್ನು ಅಂತಿಮಗೊಳಿಸಿ ಗೆಜೆಟ್ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

SCROLL FOR NEXT