ಕೆಂಪೇಗೌಡರ ಪ್ರತಿಮೆ 
ರಾಜ್ಯ

ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಉದ್ಘಾಟನೆ, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಉದ್ಘಾಟಿಸಲು, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಈ ಬಗ್ಗೆ ನಿನ್ನೆ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಅವರು ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ನ.11ರಂದು ಕೆಂಪೇಗೌಡ ಏರ್​​ಪೋರ್ಟ್ ಮುಂದೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ರಥಗಳು ಸಿದ್ದವಾಗಿದ್ದು, ಅಕ್ಟೋಬರ್​ 21ರಂದು ವಿಧಾನಸೌಧದ ಮುಂಭಾಗ ರಥಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಅಭಿಯಾನ ಯಶಸ್ವಿ ಆಗುವಂತೆ ವಿಧಾನಸೌಧದಲ್ಲಿ ನಿನ್ನೆ ನಡೆದ ಡಿಸಿಗಳ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT