ತಲಕಾವೇರಿ ತೀರ್ಥೋದ್ಭವ 
ರಾಜ್ಯ

ಮಡಿಕೇರಿ: ತಲಕಾವೇರಿ ತೀರ್ಥೋದ್ಭವಕ್ಕೆ ಸಾವಿರಾರು ಜನ ಸಾಕ್ಷಿ

ಕೊಡಗಿನ ಕುಲದೇವಿ ನಾಡಿನ ಜೀವನದಿ ಮಾತೆ ಕಾವೇರಿ ನಿಗದಿಯಂತೆ ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು.

ಮಡಿಕೇರಿ: ಕೊಡಗಿನ ಕುಲದೇವಿ ನಾಡಿನ ಜೀವನದಿ ಮಾತೆ ಕಾವೇರಿ ನಿಗದಿಯಂತೆ ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು.

ಸಂಜೆ 5 ಯಿಂದಲೇ ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ನೆರವೇರಿತು. ನಿಗದಿತ ಸಮಯದಂತೆ ಕಾವೇರಿ ಮಾತೆ ಮೇಷ ಲಗ್ನದಲ್ಲಿ ಸಂಜೆ 7 ಗಂಟೆ 22 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ನಿಗದಿತ ಸಮಯಕ್ಕಿಂತ 1 ನಿಮಿಷ ತಡವಾಗಿ ತೀರ್ಥೋದ್ಭವವಾಯಿತು.

ಮತ್ತೊಂದೆಡೆ ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಭಾಗಮಂಡಲದಿಂದ 8 ಕಿಮೀ ದೂರದ ತಲಕಾವೇರಿವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿದ್ದರು. ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟ ಭಕ್ತರು ಕಾವೇರಿ ಮಾತೆಯನ್ನು ನೆನೆಯುತ್ತಾ ತಲಕಾವೇರಿ  ತಲುಪಿದರು. ಕೊಡಗು ಅಷ್ಟೇ ಅಲ್ಲದೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತರು  ತಲಕಾವೇರಿಗೆ ಆಗಮಿಸಿದ್ದರು.

ಎರಡು ವರ್ಷಗಳ ನಂತರ ಕೋವಿಡ್ ಸಂಬಂಧಿತ ನಿರ್ಬಂಧಗಳ ನಂತರ, ಆಚರಣೆಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲಾಗುತ್ತಿದೆ. ತಲಕಾವೇರಿಗೆ ಆಗಮಿಸುವ ಭಕ್ತರಿಗೆ ನವೆಂಬರ್ 17ರವರೆಗೆ ಕೊಡಗು ಏಕೀಕರಣ ರಂಗದಿಂದ ಅನ್ನಸಂತರ್ಪಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ