ರಾಜ್ಯ

ಸೀಟ್ ಬೆಲ್ಟ್ ಧರಿಸದವರಿಗೆ 1,000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ

Nagaraja AB

ಬೆಂಗಳೂರು: ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸುವವರಿಗೆ 1,000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಈ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಕಮಿಷನರೇಟ್ ಮತ್ತು ಪೊಲೀಸ್ ಅಧೀಕ್ಷಕರುಗಳಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಇದುವರೆಗೂ ಸೀಟ್ ಬೆಲ್ಟ್ ಧರಿಸದವರಿಗೆ 500 ರೂ. ದಂಡ ವಿಧಿಸಲಾಗುತಿತ್ತು. ಆದರೆ, ಇತ್ತೀಚಿಗೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ.

ಪ್ರಯಾಣಿಕರ ಸಂಖ್ಯೆ 8 ಮೀರದಂತೆ ಇರುವ ವಾಹನಗಳಲ್ಲಿ  ಪ್ರಯಾಣಿಸುವವರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ಕಾರು, ಖಾಸಗಿ ಬಾಡಿಗೆ ವಾಹನಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರು ಕೂಡ ಸೀಟ್ ಬೆಲ್ಟ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು. 

SCROLL FOR NEXT