ಕೆಎಸ್​​ಆರ್​​ಟಿಸಿ, ಎಸ್​ಬಿಐ​​ನೊಂದಿಗೆ ಒಡಂಬಡಿಕೆ 
ರಾಜ್ಯ

ಕೆಎಸ್ ಆರ್ ಟಿಸಿ ನೌಕರರಿಗೆ ಸಿಹಿ ಸುದ್ದಿ: ಇದೇ ಮೊದಲ ಬಾರಿಗೆ 50 ಲಕ್ಷ ರೂ. ಅಪಘಾತ ವಿಮೆ ಜಾರಿ

ರಾಜ್ಯ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್​​ಆರ್​​ಟಿಸಿ)ಯ ನೌಕರರಿಗೆ ಬುಧವಾರ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಸಿಬ್ಬಂದಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ. 

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್​​ಆರ್​​ಟಿಸಿ)ಯ ನೌಕರರಿಗೆ ಬುಧವಾರ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಸಿಬ್ಬಂದಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ. 

ಈ ಅಪಘಾ ವಿಮಾ ಯೋಜನೆಗೆ ಸಂಬಂಧಿಸಿದಂತೆ ಕೆಎಸ್​​ಆರ್​​ಟಿಸಿ, ಎಸ್​ಬಿಐ​​ನೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಗೆ ಕೆಎಸ್ ಆರ್ ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಹಾಗೂ ಎಸ್‌ಬಿಐ ಡಿಜಿಎಂ ಪಂಕಜ್ ತಪ್ಲಿಯಾಲ್ ಸಹಿ ಹಾಕಿದರು.

ಇದುವರೆಗೂ ನಿಗಮದ ಸಿಬ್ಬಂದಿ ಅಪಘಾತದಲ್ಲಿ(ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ, ಶಾಶ್ವತ ಅಥವಾ ಭಾಗಶಃ ಅಂಗವೈಕಲ್ಯಕ್ಕೆ ತುತ್ತಾದರೆ ಯಾವುದೇ ದೊಡ್ಡ ಮೊತ್ತದ ಪರಿಹಾರದ ಹಣ ಅವರ ಅವಲಂಬಿತರಿಗಾಗಲಿ ಅಥವಾ ಅವರಿಗಾಗಲಿ ಲಭಿಸುತ್ತಿರಲಿಲ್ಲ. ಹೀಗಾಗಿ ಕೆಎಸ್ಆರ್ ಟಿಸಿ ಮೊದಲ ಬಾರಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವೇತನ ಖಾತೆಯನ್ನು ಹೊಂದಿರುವ ನಿಗಮದ ನೌಕರರಿಗೆ 'ಪ್ರೀಮಿಯಂ ರಹಿತ' ವೈಯುಕ್ತಿಕ ಅಪಘಾತ ವಿಮೆ ಜಾರಿಗೊಳಿಸಲಾಗಿದೆ. ಈ ವೈಯುಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 50 ಲಕ್ಷ ರೂ. ಪರಿಹಾರದ ಹಣ ಕೂಡಲೇ ದೊರೆಯಲಿದೆ.

ಅಪಘಾತದಲ್ಲಿ ಸಿಬ್ಬಂದಿ ಶಾಶ್ವತವಾಗಿ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದಲ್ಲಿ 20 ಲಕ್ಷ ರೂ. ಹ಼ಣ ಹಾಗೂ ಭಾಗಶಃ ಅಂಗವೈಕಲ್ಯ ಉಂಟಾದಲ್ಲಿ 10 ಲಕ್ಷ ರೂ. ವಿಮಾ ಪರಿಹಾರ ದೊರೆಯಲಿದೆ. ಈ ವಿಮಾ ಯೋಜನೆಯಲ್ಲಿ ಮತ್ತೊಂದು ಉಪಯಕ್ತ ಕ್ರಮವೆಂದರೆ ಕರ್ತವ್ಯನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಮಯದಲ್ಲೂ ಸಂಭವಿಸುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT