ರಾಜ್ಯ

ಕೊಡಗಿನಲ್ಲಿ ಕಾವೇರಿ ನದಿ ಉತ್ಸವಕ್ಕೆ ಚಾಲನೆ

Lingaraj Badiger

ಮಡಿಕೇರಿ: ತಲಕಾವೇರಿಯಲ್ಲಿ ಶುಕ್ರವಾರ ಬೆಳಗ್ಗೆ ಶಾಸ್ತ್ರೋಕ್ತ ಪೂಜೆಯೊಂದಿಗೆ ‘ಕಾವೇರಿ ನದಿ ಉತ್ಸವ’ಕ್ಕೆ ಚಾಲನೆ ನೀಡಲಾಯಿತು. 

ಕಾವೇರಿ ನದಿಯನ್ನು ಮಾಲಿನ್ಯದಿಂದ ರಕ್ಷಿಸುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಲು ಕಾವೇರಿ ನೀರಾವರಿ ನಿಗಮವು ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಅರಮೇರಿ ಮಠದ ಶಾಂತಾ ಮಲ್ಲಿಕಾರ್ಜುನ, ಕಿರಿಕೊಡ್ಲಿ ಮಠದ ಸದಾಶಿವ, ಪಂಡಿತ್ ಬಾನು ಪ್ರಕಾಶ್ ಮತ್ತಿತರರು ಕಾವೇರಿ ನದಿ ಉತ್ಸವಕ್ಕೆ ಚಾಲನೆ ನೀಡಿದರು.

“ಕಾವೇರಿ ನದಿಯು ತಲಕಾವೇರಿಯಲ್ಲಿ ಹುಟ್ಟಿ, ಕರ್ನಾಟಕ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ 800 ಕಿ.ಮೀ.ಗೂ ಹೆಚ್ಚು ಹರಿದು ನಂತರ ಸಾಗರವನ್ನು ಸೇರುತ್ತದೆ.

ಈ ವೇಳೆ ಮಾತನಾಡಿದ ಶಾಸಕ ಕೆಜಿ ಬೋಪಯ್ಯ ಅವರು,  ನದಿಯ ಶುದ್ಧತೆಯನ್ನು ಕಾಪಾಡಿಕೊಳ್ಳಲು ರಾಜ್ಯದಿಂದ ಜಾಗೃತಿ ಅಭಿಯಾನ ಪ್ರಾರಂಭಿಸಲಾಗಿದೆ. ಕಾವೇರಿ ನದಿಯ ಸ್ವಚ್ಛತೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

''ಸಿದ್ದಾಪುರ ಮತ್ತಿತರ ಪ್ರದೇಶಗಳಲ್ಲಿ ಅವೈಜ್ಞಾನಿಕ ತ್ಯಾಜ್ಯ ನಿರ್ವಹಣೆಯಿಂದ ಕಾವೇರಿ ನದಿ ಮೂಲದಲ್ಲೇ ಕಲುಷಿತಗೊಳ್ಳುತ್ತಿದೆ. ನಿವಾಸಿಗಳು ನದಿ ಜಲಾನಯನ ಪ್ರದೇಶಗಳಲ್ಲಿ ಕಸ ಹಾಕುವುದನ್ನು ನಿಲ್ಲಿಸಬೇಕು ಎಂದು ಅವರು ಹೇಳಿದರು.

ಬಳಿಕ ಭಾಗಮಂಡಲ ‘ತ್ರಿವೇಣಿ ಸಂಗಮ’ದಲ್ಲಿ ನದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕುಶಾಲನಗರದಲ್ಲಿ ಹಲವಾರು ನಿವಾಸಿಗಳು ಪರಿಸರ ಸ್ನೇಹಿ ಜೀವನಶೈಲಿಯನ್ನು ಅಭ್ಯಾಸ ಮಾಡುವ ಮೂಲಕ ನದಿಯನ್ನು ರಕ್ಷಿಸುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಫಲಕಗಳನ್ನು ಹಿಡಿದು ಜಾಗೃತಿ ಅಭಿಯಾನ ನಡೆಸಿದರು.

SCROLL FOR NEXT