ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಭಯೋತ್ಪಾದನೆ ದಮನಕ್ಕೆ ಪೊಲೀಸರಿಗೆ ಎಚ್ಚರಿಕೆ ಅತ್ಯಗತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಭಯೋತ್ಪಾದನೆ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡಾ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಭಯೋತ್ಪಾದನೆ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡಾ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಿ ಮಾತನಾಡಿದ ಅವರು, ಕರ್ನಾಟಕ ಪೊಲೀಸ್ ಇಲಾಖೆಗೆ ದೊಡ್ಡ ಇತಿಹಾಸ ಇದೆ. ದೇಶ ಹಾಗೂ ವಿದೇಶಿ ದುಷ್ಟ ಶಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿವೆ. ಆದರೆ, ಇಂತಹ ಅಪರಾಧಗಳ ಸಾಧ್ಯತೆಗಳನ್ನು ಗ್ರಹಿಸಿ ಕಾನೂನನ್ನು ಮುಂಚಿತವಾಗಿಯೇ ರೂಪಿಸುವ ಅಗತ್ಯವಿದೆ ಎಂದರು. 

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನಿರ್ವಹಣೆಯಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಪೊಲೀಸರಿಗೆ ಸೌಲಭ್ಯ ನೀಡುವ ವಿಚಾರದಲ್ಲಿ ನಮ್ಮ ಸರ್ಕಾರ ಬೇರೆ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ. ಪ್ರತಿ ವರ್ಷ ನಾಲ್ಕೈದು ಸಾವಿರ ಪೊಲೀಸರ ನೇಮಕ ಮಾಡಿಕೊಳ್ಳಲಾಗುತ್ತಿದೆ. ತರಬೇತಿಯಲ್ಲಿ ಹೊಸ ತಂತ್ರಜ್ಞಾನದ ಪರಿಚಯ, ಸೈಬರ್ ಅಪರಾಧಗಳ ಕುರಿತು ಅರಿವು ಮೂಡಿಸಬೇಕಾಗಿದೆ. ಇನ್ಸ್ ಪೆಕ್ಟರ್, ಡಿವೈಸ್ಪಿ ವರ್ಗಗಳ ಅಧಿಕಾರಿಗಳಿಗೆ ತರಬೇತಿ ಅಗತ್ಯವಿದೆ. ಅದಕ್ಕೆ ಪ್ರತ್ಯೇಕ ತರಬೇತಿ ಕಮಾಂಡ್ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಪೊಲೀಸರ ತ್ಯಾಗ, ಬಲಿದಾನ ಹಾಗೂ ಸಾಧನೆಗಳನ್ನು ಜನರಿಗೆ ತಿಳಿಸಲು ಪೊಲೀಸ್ ವಸ್ತು ಸಂಗ್ರಹಾಲಯ, ಎಟಿಎಸ್ ಬಲವರ್ಧನೆ, ಜೈಲುಗಳ ಸಂಖ್ಯೆ ಹಾಗೂ ಸಾಮರ್ಥ್ಯ ಹೆಚ್ಚಿಸಲಾಗುವುದಲ್ಲದೇ, ಇನ್ನಷ್ಟು ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್