ಕುಸಿದಿರುವ ಕಟ್ಟಡ 
ರಾಜ್ಯ

ಭಾರೀ ಮಳೆ: ಕುಸಿದ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ, ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಪಾರು!

ಭಾರೀ ಮಳೆಗೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಮೈಸೂರು: ಭಾರೀ ಮಳೆಗೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಮಹಾರಾಣಿ ಪದವಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಕುಸಿದ ಭಾಗವು ರಸಾಯನ ವಿಜ್ಞಾನದ ಪ್ರಯೋಗಾಲಯದ ಕೊಠಡಿಯಾಗಿದೆ ಎಂದು ವರದಿಗಳು ತಿಳಿಸಿವೆ. 

ವಿದ್ಯಾರ್ಥಿಗಳು 10.30ರ ವೇಳೆಗೆ ಬರುವರಿದ್ದರು. ಈ ವೇಳೆ ಬಿರುಕು ಮೂಡಿದ್ದನ್ನು ಗಮನಿಸಿದ ವಿಭಾಗದ ಮುಖ್ಯಸ್ಥ ಕೆ.ಕೆ.ಪದ್ಮನಾಭ 10.15ರ ವೇಳೆ ಪ್ರಾಂಶುಪಾಲರ ಗಮನಕ್ಕೆ ತಂದಿದ್ದಾರೆ. ಕೂಡಲೇ ಕೊಠಡಿಗೆ ಬಂದ ಪ್ರಾಂಶುಪಾಲ ಡಾ.ಡಿ.ರವಿ ಅವರು ಕೊಠಡಿಗೆ ಬೀಗ ಹಾಕಿಸಿದ್ದಲ್ಲದೆ, ಎಲೆಕ್ಟ್ರಿಕ್ ಸಂಪರ್ಕವನ್ನು ಕಡಿತಗೊಳಿಸಿ ಕಟ್ಟಡದ ಒಳಗೆ ಯಾರೂ ಪ್ರವೇಶಿಸದಂತೆ ಸೂಚನೆ ನೀಡಿದ್ದಾರೆ. 

ಘಟನೆ ವೇಳೆ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಕುಸಿದು ಬಿದ್ದ ಕಟ್ಟಡದ ಕೆಳಗೆ ಯಾರೂ ಇಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಖಚಿತಪಡಿಸಿಕೊಂಡಿದ್ದಾರೆ. 

ಈ ನಡುವೆ ಕಾಲೇಜಿನ ಇತರೆ ಕಟ್ಟಡ ಕೂಡ ಇದೇ ಪರಿಸ್ಥಿತಿ ಇದ್ದು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!