ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದ ಪೊಲೀಸ್ ಪೇದೆಗೆ ಜೀವಾವಧಿ ಶಿಕ್ಷೆ!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪೇದೆಯೊಬ್ಬರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪೇದೆಯೊಬ್ಬರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರವೀಣ್ ಸಾಲ್ಯಾನ್ (35) ಶಿಕ್ಷೆಗೊಳಗಾದ ಪೊಲೀಸ್ ಪೇದೆಯಾಗಿದ್ದಾರೆ. ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಪ್ರವೀಣ್ ಅವರಿಗೆ ರೂ.10,000 ರೂಪಾಯಿ ದಂಡ ವಿಧಿಸಿ, ಜೀವಾವಧಿ ಶಿಕ್ಷೆ ನೀಡಿದ್ದಾರೆ. 

ಬಜಪೆ ಸಿದ್ಧಾರ್ಥ ನಗರ ನಿವಾಸಿ ಪ್ರವೀಣ್‌ ಸಾಲ್ಯಾನ್‌ 2015ರ ಫೆ. 16ರಂದು ಅಪ್ರಾಪ್ತ ವಯಸ್ಕ ಬಾಲಕಿಯನ್ನು ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡಿದ್ದ. ಅನಂತರ ತಾನು ಪ್ರೀತಿಸುತ್ತಿರುವುದಾಗಿ ನಾಟಕವಾಡಿದ ಆತ ನಿರಂತರ ಮೊಬೈಲ್‌ ಮತ್ತು ಸಾಮಾಜಿಕ ಜಾಲತಾಣ ಮೂಲಕ ಆಕೆಯನ್ನು ಸಂಪರ್ಕಿಸುತ್ತಿದ್ದ. ತನ್ನ ಗುಪ್ತಾಂಗದ ಚಿತ್ರಗಳನ್ನು ಆಕೆಗೆ ಕಳುಹಿಸಿ, ಅಶ್ಲೀಲ ಸಂಭಾಷಣೆಯನ್ನೂ ನಡೆಸುತ್ತಿದ್ದ. ಬಳಿಕ ಅಕೆಯಲ್ಲಿ ಒಂದು ಲಕ್ಷ ರೂ. ಹಣ ಅಥವಾ ಚಿನ್ನ ನೀಡಬೇಕು ಎಂದು ಬೇಡಿಕೆಯಿಟ್ಟು ಬೆದರಿಸಿದ್ದ. ಇದರಿಂದ ಆತಂಕಗೊಂಡ ಆಕೆ 2015ರ ಜೂ. 10ರಂದು ಬೆಳಗ್ಗೆ 5ರಿಂದ 6.15ರ ನಡುವೆ ತನ್ನ ಮನೆಯ ಬೆಡ್‌ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಗ್ರ ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಎಫ್‌ಟಿಎಸ್‌ಸಿ-1 (ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸಿ ಅಪರಾಧಿಗೆ ಐಪಿಸಿ 305ರಡಿ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ಹಾಗೂ ಸೆಕ್ಷನ್‌ 12ರಡಿ (ಪೋಕ್ಸೋ) 3 ವರ್ಷ ಕಠಿಣ ಸಜೆ ಹಾಗೂ 1 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT