ರಾಜ್ಯ

ಬೆಂಗಳೂರು: ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Lingaraj Badiger

ಬೆಂಗಳೂರು: ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ಒಂದೇ ಕುಟುಂಬದ ಮೂವರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ ಕುಮಾರ್(54), ಆತನ ಪತ್ನಿ ಓಮನ್ ಸಂತೋಷ್(50) ಹಾಗೂ ಮಗಳು ಸನುಷಾ(17) ಎಂದು ಗುರುತಿಸಲಾಗಿದೆ.

ಸಾವಿಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಎಚ್​ಎಸ್​ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT