ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಅತಿಕ್ರಮ ಪ್ರವೇಶ, ಶಾಲೆ ಗೋಡೆ ಧ್ವಂಸಗೊಳಿಸಿದ್ದ 9 ಮಂದಿಯನ್ನು ಬಂಧನ

ಕ್ವೀನ್ಸ್ ರಸ್ತೆಯಲ್ಲಿರುವ ಕಮಲಾಬಾಯಿ ಶಾಲೆಯ ಕಾಂಪೌಂಡ್ ಅನ್ನು ಅತಿಕ್ರಮಿಸಿ, ಶಾಲಾ ಗೋಡೆಯನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಮಹಿಳೆ ಸೇರಿದಂತೆ 9 ಮಂದಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಕ್ವೀನ್ಸ್ ರಸ್ತೆಯಲ್ಲಿರುವ ಕಮಲಾಬಾಯಿ ಶಾಲೆಯ ಕಾಂಪೌಂಡ್ ಅನ್ನು ಅತಿಕ್ರಮಿಸಿ, ಶಾಲಾ ಗೋಡೆಯನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಮಹಿಳೆ ಸೇರಿದಂತೆ 9 ಮಂದಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಶಾಲೆಯ ಆವರಣದಲ್ಲಿರುವ ಮೂರು ಎಕರೆ ಜಾಗ ವಿವಾದದಲ್ಲಿದೆ, ಪ್ರಕರಣ ಸಂಬಂಧ ಇತ್ತೀಚೆಗೆ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಆದರೆ, ಗುರುವಾರ ರಾತ್ರಿ ತಂಡವೊಂದು ಶಾಲೆಯ ಕಾಂಪೌಂಡ್ ಗೋಡೆಯನ್ನು ಕೆಡವಿದೆ. ಈ ವೇಳೆ ಇದನ್ನು ತಡೆಯಲು ಯತ್ನಿಸಿದ ಕಮಲಾ ಬಾಯಿ ಎಜುಕೇಶನ್ ಟ್ರಸ್ಟ್‌ನ ಕೆಲ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಈ ಹಿಂದೆಯೂ ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು.

ಈ ನಡುವೆ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರೋಪಿಗಳ ಪರ ವಕೀಲ ಸಮದ್ ಖಾನ್ ಮುಖ್ಯ ನ್ಯಾಯಮೂರ್ತಿ ಹಾಗೂ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿವಿಲ್ ವಿವಾದದಲ್ಲಿ ವಿನಾಕಾರಣ ಪೊಲೀಸರು ಮಧ್ಯಪ್ರವೇಶಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು