ಸಾಂದರ್ಭಿಕ ಚಿತ್ರ 
ರಾಜ್ಯ

ಗಂಡ ಸಾವು: ಒಂದೂವರೆ ವರ್ಷದ ಕಂದಮ್ಮನ ಕೊಂದು ಪತ್ನಿ ನೇಣಿಗೆ ಶರಣು

ಕ್ರಿಮಿನಾಶಕ ಸೇವಿಸಿದ ಗಂಡ  ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಕ್ಕೆ ಮನನೊಂದ ಪತ್ನಿಒಂದೂವರೆ ವರ್ಷದ ಹೆಣ್ಣು ಮಗುವನ್ನು  ಕೊಂದು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ  ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಕ್ರಿಮಿನಾಶಕ ಸೇವಿಸಿದ ಗಂಡ  ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಕ್ಕೆ ಮನನೊಂದ ಪತ್ನಿಒಂದೂವರೆ ವರ್ಷದ ಹೆಣ್ಣು ಮಗುವನ್ನು  ಕೊಂದು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ  ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ,  ಪತ್ನಿ ಹಾಗೂ ಪುಟ್ಟ ಮಗು ಸಾವನ್ನಪ್ಪಿದ್ದಾರೆ.  ಹೊಳೆಪ್ಪ ಮಾರುತಿ ಮಸ್ತಿ (25), ಈತನ ಪತ್ನಿ ವಾಸಂತಿ (22) ಹಾಗೂ ಒಂದೂವರೆ ವರ್ಷದ ಮಗು ಮೃತ ದುರ್ದೈವಿ.ಮದ್ಯದ ಅಮಲಿನಲ್ಲಿ ಹೊಳೆಪ್ಪ ಪತ್ನಿಯೊಂದಿಗೆ ಜಗಳವಾಡಿದ್ದನು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುವ ಉದ್ದೇಶದಿಂದ ವಿಷ ಕುಡಿದಿದ್ದನು.

ತಕ್ಷಣ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆತ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ. ಇದರಿಂದ ಮನನೊಂದ ಪತ್ನಿ ವಾಸಂತಿ ಕೂಡ ತಮ್ಮ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಗುವನ್ನು ಎತ್ತಿಕೊಂಡು ಊರ ಹೊರಗಿನ ಹೊಲಕ್ಕೆ ಹೋಗಿದ್ದ ವಾಸಂತಿ ಮರಳಿ ಮನೆಗೆ ಬಂದಿರಲಿಲ್ಲ. ಇದರಿಂದ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಾಸಂತಿಯ ಶವ ಕಂಡುಬಂದಿದೆ. ವಾಸಂತಿ ಕಾಲಿನಡಿ ಪುಟ್ಟ ಮಗುವಿನ ಮೃತದೇಹ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇವರಿಗೆ ಮೂರು ವರ್ಷದ ಮತ್ತೊಬ್ಬಳು ಪುತ್ರಿ ಇದ್ದು, ಆಟವಾಡಲು ಹೊರಗೆ ಹೋಗಿದ್ದರಿಂದ ಬದುಕುಳಿದಿದ್ದಾಳೆ. ಘಟನೆ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!