ಬಿಎಸ್ ಪಾಟೀಲ್ 
ರಾಜ್ಯ

ಕಂದಾಯ ಕಚೇರಿಗಳಲ್ಲಿ ಅಕ್ರಮ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು

ಬೆಂಗಳೂರು ಕಂದಾಯ ಕಚೇರಿಗಳಲ್ಲಿ ಅಕ್ರಮಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು, ವಿಚಾರಣೆ ಆರಂಭಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಕಂದಾಯ ಕಚೇರಿಗಳಲ್ಲಿ ಅಕ್ರಮಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು, ವಿಚಾರಣೆ ಆರಂಭಿಸಿದ್ದಾರೆ.

ಲೋಕಾಯುಕ್ತ ಪೊಲೀಸ್‌ ಮತ್ತು ನ್ಯಾಯಾಂಗ ವಿಭಾಗಗಳ ಅಧಿಕಾರಿಗಳ ಜಂಟಿ ತಂಡಗಳು ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ಬೆಂಗಳೂರು ದಕ್ಷಿಣ ಮತ್ತು ಉತ್ತರ ಉಪ ವಿಭಾಗಾಧಿಕಾರಿಗಳ ಕಚೇರಿಗಳು, ಉತ್ತರ, ದಕ್ಷಿಣ, ಪೂರ್ವ, ಯಲಹಂಕ ಮತ್ತು ಆನೇಕಲ್‌ ತಾಲ್ಲೂಕು ಕಚೇರಿಗಳಲ್ಲಿ ಸೆಪ್ಟೆಂಬರ್‌ 27ರಂದು ದಿಢೀರ್‌ ತಪಾಸಣೆ ಮಾಡಿದ್ದವು.

ಕಂದಾಯ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್‌ ಮತ್ತು ನ್ಯಾಯಾಂಗ ವಿಭಾಗಗಳ ಅಧಿಕಾರಿಗಳ ಜಂಟಿ ತಂಡಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. 

ಈ ವೇಳೆ ಅಧಿಕಾರಿಗಳ ಕಚೇರಿ ಮತ್ತು ಮುಭಾಗದಲ್ಲಿ ಲೆದರ್ ಕುರ್ಚಿಗಳು, ಸೋಫಾಗಳು, ಎಸಿಗಳು, ಟಿವಿ, ಫ್ರಿಡ್ಜ್, ಓವನ್, ಡೈನಿಂಗ್ ಟೇಬಲ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದವು. ಈ ಸಂಬಂಧ ವರದಿ ಹಾಗೂ ದಾಖಲೆಗಳನ್ನು ಸಲ್ಲಿಸುವಂತೆಸೂಚನೆ ನೀಡಿದ್ದರು. ಆದರೆ, ದಾಖಲೆ ಒದಗಿಸುವಲ್ಲಿ ವಿಫಲರಾಗಿದ್ದರು. ಮಾಹಿತಿಗಳ ಪ್ರಕಾರ ಅಪಾರ್ಟ್'ಮೆಂಟ್ ಬಿಲ್ಡರ್ ಹಾಗೂ ಕೆಲ ವ್ಯಾಪಾರಿಗಳು ಈ ವಸ್ತುಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT