ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಸರ್ಕಾರ ಅನುಮತಿ!

ಬೆಂಗಳೂರಿನಲ್ಲಿ 1,841 ಸೇರಿ ರಾಜ್ಯದಲ್ಲಿ ಒಟ್ಟು 10,899  ಮಸೀದಿಗಳಿಗೆ ಲೌಡ್‌ ಸ್ಪೀಕರ್‌ ಬಳಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಬೆಂಗಳೂರು: ಬೆಂಗಳೂರಿನಲ್ಲಿ 1,841 ಸೇರಿ ರಾಜ್ಯದಲ್ಲಿ ಒಟ್ಟು 10,899  ಮಸೀದಿಗಳಿಗೆ ಲೌಡ್‌ ಸ್ಪೀಕರ್‌ ಬಳಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 

ಮಸೀದಿ, ಮಂದಿರ ಹಾಗೂ ಚರ್ಚ್‍ಗಳಿಂದ ಧ್ವನಿವರ್ಧಕ ಬಳಕೆಗೆ 17 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿದ್ದವು. ಇದರಲ್ಲಿ 10,889 ಮಸೀದಿಗಳು, 3 ಸಾವಿರಕ್ಕೂ ಹೆಚ್ಚು ಹಿಂದೂ ದೇವಾಲಯ, 1,400ಕ್ಕೂ ಹೆಚ್ಚು ಚರ್ಚ್‍ಗಳಿಗೆ ಸರ್ಕಾರ ಅನುಮತಿ ನೀಡಲಾಗಿದೆ. ಸರ್ಕಾರ 2 ವರ್ಷಗಳ ಅವಧಿಗೆ ಅನುಮತಿ ಸಿಕ್ಕಿದ್ದು, ಅನುಮತಿ ಪಡೆದ ಧಾರ್ಮಿಕ ಕೇಂದ್ರಗಳು 450 ರೂಪಾಯಿ ಶುಲ್ಕ ಪಾವತಿಸಬೇಕಿದೆ.

ಹಿಂದೂ ಸಂಘಟನೆಗಳು ಮಸೀದಿಗಳಲ್ಲಿನ ಆಜಾನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಸೀದಿ, ದೇವಸ್ಥಾನ ಹಾಗೂ ಚರ್ಚ್‌ ಗಳಲ್ಲಿ ಲೌಡ್‌ ಸ್ಪೀಕರ್‌ ಬಳಕೆ ನಿಷೇಧಿಸಬೇಕು ಹಾಗೂ ಧ್ವನಿವರ್ಧಕ ಬಳಕೆಯ ನಿಯಮ ರೂಪಿಸಬೇಕು ಎಂದು ಚರ್ಚೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಮಸೀದಿ, ದೇವಸ್ಥಾನ ಹಾಗೂ ಚರ್ಚ್‌ ಗಳಲ್ಲಿ ಪರವಾನಗಿ ಇಲ್ಲದೇ ಧ್ವನಿವರ್ಧಕ ಬಳಕೆಗೆ ನಿರ್ಬಂಧ ವಿಧಿಸಲಾಗಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಗಳ ವಿವೇಚನೆಗೆ ಬಿಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT