ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ279 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,67,871ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40253 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 225 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1873902ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಇದನ್ನು ಓದಿ: ಸಾಂಕ್ರಾಮಿಕ ರೋಗದ ಅಡ್ಡ ಪರಿಣಾಮಗಳು 100 ದಿನಗಳಲ್ಲಿ ಹೋಗುವುದಿಲ್ಲ: ರೋಜ್ಗಾರ್ ಮೇಳದಲ್ಲಿ ಪ್ರಧಾನಿ ಮೋದಿ
ರಾಜ್ಯದಲ್ಲಿ ಇಂದು 416 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,25,289ಕ್ಕೆ ಏರಿಕೆಯಾಗಿದೆ. ಇನ್ನು 2287 ಸಕ್ರಿಯ ಪ್ರಕರಣಗಳಿವೆ.