ಮಂಡ್ಯ: ದೀಪಾವಳಿಗೆ ತಯಾರಿ ನಡೆಸ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಸಾವು
ತಮ್ಮ ಸ್ಟುಡಿಯೋದಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ತಯಾರಿ ನಡೆಸುತ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಮಂಡ್ಯ: ತಮ್ಮ ಸ್ಟುಡಿಯೋದಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ತಯಾರಿ ನಡೆಸುತ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಮೃತ ಫೋಟೋಗ್ರಾಫರ್ ಅನ್ನು ವಿವೇಕ್(45) ಮತ್ತು ಮಧುಸೂಧನ್(35) ಎಂದು ಗುರುತಿಸಲಾಗಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸ್ಟುಡಿಯೋ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.