ಸಚವರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಆರ್. ಅಶೋಕ, ಡಾ.ಕೆ.ಸುಧಾಕರ್ 
ರಾಜ್ಯ

ಕೆಂಪೇಗೌಡ ಪ್ರತಿಮೆ ಉದ್ಘಾಟನೆ: ಅರೇನಾ ಆವರಣದಲ್ಲಿ ಮೋದಿ ಸಭೆ, ಮೂವರು ಸಚಿವರಿಂದ ಸ್ಥಳ ವೀಕ್ಷಣೆ

ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಭಾಗವಾಗಿ ನ.11ರಂದು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗೆ ನಡೆಯುತ್ತಿರುವ ಪ್ರಗತಿ ಮತ್ತು ಸ್ಥಳ ಪರಿಶೀಲನೆಯನ್ನು ಸಚಿವರಾದ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಆರ್ ಅಶೋಕ ಹಾಗೂ  ಡಾ.ಕೆ ಸುಧಾಕರ್ ಶನಿವಾರ ನಡೆಸಿದರು.  

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಭಾಗವಾಗಿ ನ.11ರಂದು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ  ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆಗೆ ನಡೆಯುತ್ತಿರುವ ಪ್ರಗತಿ ಮತ್ತು ಸ್ಥಳ ಪರಿಶೀಲನೆಯನ್ನು  ಸಚಿವರಾದ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಆರ್ ಅಶೋಕ ಹಾಗೂ  ಡಾ. ಕೆ ಸುಧಾಕರ್  ಶನಿವಾರ ನಡೆಸಿದರು.  

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆಯಂತೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಮೂವರೂ ನಾಯಕರು, ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪಿಸುತ್ತಿರುವ ಜಾಗವನ್ನು ಕೂಡ ಕೂಲಂಕಷವಾಗಿ ವೀಕ್ಷಿಸಿದರು.ಮೋದಿಯವರ ಸಾರ್ವಜನಿಕ ಸಭೆಯನ್ನು ಎಲ್ಲಿ ನಡೆಸಿದರೆ ಸೂಕ್ತವೆನ್ನುವ ಉದ್ದೇಶದಿಂದ ಪ್ರತಿಮೆಯ ಹತ್ತಿರದಲ್ಲೇ ಇರುವ 40 ಎಕರೆ ವಿಸ್ತೀರ್ಣ ದ 'ಅರೇನಾ' ಪರಿಸರ ಮತ್ತು ಏರ್ ಪೋರ್ಟ್ ರೈಲು ನಿಲ್ದಾಣದ ಬಳಿ ಇರುವ ಸ್ಥಳಗಳೆರಡನ್ನೂ ಇವರು ಅವಲೋಕಿಸಿದರು.

ರೈಲು ನಿಲ್ದಾಣ ಇರುವ ಪ್ರದೇಶವು ಪ್ರತಿಮೆಗೆ ತುಂಬಾ ದೂರದಲ್ಲಿ ಇದ್ದು ಅಲ್ಲಿಗೆ ಪ್ರತಿಮೆ ಕೂಡ ಕಾಣುವುದಿಲ್ಲ. ಆದರೆ ಅರೇನಾ ಜಾಗಕ್ಕೆ ಪ್ರತಿಮೆ ಕಾಣಿಸುತ್ತದೆ. ಹೀಗಾಗಿ ಅದೇ ಸೂಕ್ತ ಎನ್ನುವ ಅಭಿಪ್ರಾಯವನ್ನು ಸಚಿವರು ವ್ಯಕ್ತಪಡಿಸಿದರು. ಈ ಸಂಬಂಧ ಸಿಎಂ ಅವರ ಜತೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವರು ನಿರ್ಧರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT