ರಾಜ್ಯ

ರಾಜ್ಯದ ಮೊದಲ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಭದ್ರಾ ಮೇಲ್ದಂಡೆ ಯೋಜನೆ: ಸಿಎಂ ಬೊಮ್ಮಾಯಿ

Manjula VN

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆಯಷ್ಟೇ ಬಾಕಿಯಿದ್ದು, ಅದೂ ಪೂರ್ಣಗೊಂಡರೆ, ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ. 

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮಾತನಾಡಿದ ಅವರು, ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮೋದನೆ ದೊರೆತಿದ್ದು, ಕೇಂದ್ರ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಲಾಗಿದೆ. “ಒಮ್ಮೆ ಅನುಮೋದನೆ ದೊರೆತಿದ್ದೇ ಆದರೆ, ಕಾಮಗಾರಿ ಆರಂಭಿಸಲು ಅನುದಾನ ಬರಲಿದೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು. 

ರೈಲು ಸಂಪರ್ಕ ವಿಚಾರ ಕುರಿತು ಮಾತನಾಡಿ, ತುಮಕೂರು-ದಾವಣಗೆರೆ ರೈಲು ಮಾರ್ಗವನ್ನು ಪರಿಶೀಲಿಸಲಾಗಿದೆ. ಯೋಜನೆಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಲಾಗಿದೆ. ನಂತರ ಅಗತ್ಯವಿರುವ ಯಾವುದೇ ಕ್ರಮಗಳನ್ನು ಅನುಸರಿಸಿ. ಅಗತ್ಯ ಹಣವನ್ನೂ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. 

ಕಳೆದ ಎರಡು ವರ್ಷಗಳಿಂದ ಭದ್ರಾ ಮೇಲ್ದಂಡೆ ಯೋಜನೆಗೆ 1.7 ಎಕರೆ ಸ್ವಾಧೀನಕ್ಕೆ ವಿಳಂಬವಾಗುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ರೈತರಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳಿವೆ, ಆದರೆ ಅವುಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದರು.

ಇದೇ ವೇಳೆ, ಜಿಲ್ಲೆಗೆ ಮಲತಾಯಿ ಧೋರಣೆ ತೋರುತ್ತಿರುವ ಕುರಿತ ಆರೋಪವನ್ನು ತಳ್ಳಿ ಹಾಕಿದ ಸಿಎಂ, ಬದಲಾಗುತ್ತಿರುವ ರಾಜಕೀಯ ಸನ್ನಿವೇಶದಿಂದ ಚಿತ್ರದುರ್ಗಕ್ಕೆ ಪ್ರಾತಿನಿಧ್ಯ ನೀಡಲು ಸಾಧ್ಯವಾಗುತ್ತಿಲ್ಲ. ಆದರೆ, ಈ ಬಾರಿ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

SCROLL FOR NEXT