ಪ್ರಹ್ಲಾದ್ ಜೋಶಿ 
ರಾಜ್ಯ

ಒಂದು ವರ್ಷದಲ್ಲಿ ಮಹದಾಯಿಯಿಂದ ಕರ್ನಾಟಕಕ್ಕೆ ಲಾಭ: ಪ್ರಹ್ಲಾದ್ ಜೋಶಿ

ಮಹದಾಯಿ ಯೋಜನೆ ಕುರಿತು ಸರ್ಕಾರಕ್ಕೆ ಅರಿವಿದ್ದು, ಶೀಘ್ರ ಅನುಷ್ಠಾನಕ್ಕೆ ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಹ್ಲಾದ ಜೋಶಿ ಅವರು ಭಾನುವಾರ ಹೇಳಿದ್ದಾರೆ.

ಹುಬ್ಬಳ್ಳಿ: ‘ಮಹದಾಯಿ ಯೋಜನೆ ಕುರಿತು ಸರ್ಕಾರಕ್ಕೆ ಅರಿವಿದ್ದು, ಶೀಘ್ರ ಅನುಷ್ಠಾನಕ್ಕೆ ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಭಾನುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯೋಜನೆ ಅನುಷ್ಠಾನದ ವಿವರಗಳ ಕುರಿತು ಕಾರ್ಯಾಗಾರಗಳ ಮೂಲಕ ಜನರು ಒತ್ತಾಯಿಸುತ್ತಿದ್ದಾರೆ. ಯೋಜನೆಯ ವಿನ್ಯಾಸ ತೆಗೆದುಕೊಂಡು ಜನರು ಏನು ಮಾಡುತ್ತಾರೆ? ಅವರಿಗೆ ನೀರು ಬೇಕು ಮತ್ತು ಅದು ಒಂದು ವರ್ಷದೊಳಗೆ ಬರುತ್ತದೆ. ನೀರಾವರಿ ಸಚಿವ ಗೋವಿಂದ ಕಾರಜೋಳ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಯೋಜನಾ ಕಾಮಗಾರಿ ವೇಳೆ ಅರಣ್ಯ ಉಳಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಹೇಳಿದರು.

ಇದೇ ವೇಳೆ ಮಹದಾಯಿ ಯೋಜನೆ ಅನುಷ್ಠಾನ ಕುರಿತು ಕಾರ್ಯಾಗಾರ ಆಯೋಜಿಸಿದ್ದ ಮಾಜಿ ಶಾಸಕ ಎನ್‌.ಎಚ್‌.ಕೋನರಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡ ಜೋಶಿ, ಕೆಲ ನಿರುದ್ಯೋಗಿಗಳು ಇಂತಹ ಕಾರ್ಯಾಗಾರಗಳನ್ನು ನಡೆಸುತ್ತಿದ್ದಾರೆಂದು ಹೇಳಿದರು. 

ಜೋಶಿಯವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೋನರೆಡ್ಡಿ ಅವರು, ನಾವು ನಿರುದ್ಯೋಗಿಗಳಾಗಿದ್ದರೆ, ಜೋಶಿ ಅವರು ಅಧಿಕಾರದಲ್ಲಿದ್ದಾರೆ ಮತ್ತು ಕೆಲಸದಲ್ಲಿದ್ದಾರೆ. ಅವರು ಸೂಕ್ತ ಮನೋಭಾವದಿಂದ ಯೋಜನೆಯನ್ನು ಜಾರಿಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇನೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!