ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಹಿಂಬದಿ ಸವಾರ ಸಾವು
ದ್ವಿಚಕ್ರ ವಾಹನವೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆರ್'ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಬೆಂಗಳೂರು: ದ್ವಿಚಕ್ರ ವಾಹನವೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆರ್'ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಆರ್'ಟಿ ನಗರ ನಿವಾದಿ ಧ್ರುವ ಆನಂದ್ (34) ಮೃತ ಹಿಂಬದಿ ಸವಾರ, ಬೈಕ್ ಸವಾರ ಹೈದರಾಬಾದ್ ಮೂಲದ ದೇವೇಂದ್ರ ರೆಡ್ಡಿ (21) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಧ್ರುವ ಆನಂದ್ ಮತ್ತು ದೇವೇಂದ್ರ ರೆಡ್ಡಿ ಭಾನುವಾರ ಮುಂಜಾನೆ 4.30ರ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ವಿಮಾನ ನಿಲ್ದಾಣದ ಕಡೆ ಹೋಗುತ್ತಿದ್ದರು. ಈ ವೇಳೆ ಬ್ಯಾಪಿಸ್ಟ್ ಆಸ್ಪತ್ರೆ ಸಮೀಪ ಬೈಕ್ ನಿಯಂತ್ರಣ ಕಳೆದುಕೊಂಡಿದೆ. ಬಳಿಕ ವಾಹನ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸವಾರರಿಬ್ಬರು ವಾಹನ ಸಹಿತ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರ ಪೆಟ್ಟು ಬಿದ್ದು ಹಿಂಬದಿ ಸವಾರ ಧ್ರುವ ಆನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸವಾರ ದೇವೇಂದ್ರ ರೆಡ್ಡಿಯನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ದೇವೇಂದ್ರ ಅವರು ಹೆಲ್ಮೆಟ್ ಧರಿಸಿರದ ಕಾರಣ ತಲೆಗೆ ಗಂಭೀರ ಪೆಟ್ಟು ಬಿದ್ದು ಮೃತ ಪಟ್ಟಿದ್ದಾರೆಂದು ತಿಳಿದುಬಂದಿದೆ. ಘಟನೆ ಸಂಬಂಧ ಆರ್'ಟಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.