ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಿಂದ ಬಿದ್ದು ಬೈಕ್ ಸವಾರ ಸಾವು

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಹಾರಿ ಕೆಳರಸ್ತೆಗೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಸಾಂದರ್ಭಿಕ ಚಿತ್ರ
Manjula VN
Updated On : 25 Oct 2022, 2:59 pm

ಬೆಂಗಳೂರು: ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಹಾರಿ ಕೆಳರಸ್ತೆಗೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಹೈದರಾಬಾದ್ ಮೂಲದ ಕೋರೆ ನಾಗಾರ್ಜುನ (33) ಮೃತ ವ್ಯಕ್ತಿಯಾಗಿದ್ದಾರೆ. ನಗರದಲ್ಲಿದ್ದ ತನ್ನ ಸಂಬಂಧಿಕರನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದ ಅವರು ಸಿಲ್ಕ್ ಬೋರ್ಡ್‌ನಿಂದ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಿದ್ದರು. ಅತಿವೇಗ ಹಿನ್ನೆಲೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದಿದೆ. ಬಳಿಕ ಮೇಲ್ಸೇತುವೆಯಿಂದ ಕೆಳಗೆ ಬಿದ್ದಿದ್ದಾರೆ.

ಘಟನೆ ವೇಳೆ ಸವಾರ ಒಬ್ಬಂಟಿಯಾಗಿ ಪ್ರಯಾಣಿಸುತ್ತಿದ್ದ. ವೇಗವಾಗಿ ಬಂದ ಸವಾರನಿಗೆ ದಾರಿ ಕುರಿತು ಗೊಂದಲಕ್ಕೊಳಗಾಗಿರಬೇಕು. ಈ ವೇಳೆ ನಿಯಂತ್ರಣ ತಪ್ಪಿ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ, ಘಟನೆ ಸಂಬಂಧ ಸಂಬಂಧಿಕರು ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ಸ್ ಸಿಟಿ ಸಂಚಾರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement