ಸಂಗ್ರಹ ಚಿತ್ರ 
ರಾಜ್ಯ

ಕೊಡಗಿನಲ್ಲೂ ಆಫ್ರಿಕನ್‌ ಹಂದಿ ಜ್ವರ ಪತ್ತೆ; ಜಾನುವಾರು ಜಾತ್ರೆ, ಸಂತೆ ನಿಷೇಧ

ವಿದೇಶಗಳಲ್ಲಿ ಭಾರಿ ಆತಂಕ ಸೃಷ್ಟಿ ಮಾಡಿರುವ ಆಫ್ರಿಕನ್‌ ಹಂದಿ ಜ್ವರ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಕೊಡಗಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಸೋಂಕು ವರದಿಯಾಗಿದೆ.

ಮಡಿಕೇರಿ: ವಿದೇಶಗಳಲ್ಲಿ ಭಾರಿ ಆತಂಕ ಸೃಷ್ಟಿ ಮಾಡಿರುವ ಆಫ್ರಿಕನ್‌ ಹಂದಿ ಜ್ವರ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಕೊಡಗಿನಲ್ಲಿ  ಆಫ್ರಿಕನ್‌ ಹಂದಿ ಜ್ವರ ಸೋಂಕು ವರದಿಯಾಗಿದೆ.

ಚರ್ಮಗಂಟು ಖಾಯಿಲೆ ವ್ಯಾಪಕವಾಗಿರುವ ಹೊತ್ತಿನಲ್ಲೇ ಕೊಡಗಿನಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದ್ದು, ತಾಲ್ಲೂಕಿನ ಗಾಳಿಬೀಡು ಗ್ರಾಮದಲ್ಲಿ ಬಿ.ಸಿ.ಗಣೇಶ ಎಂಬುವರು ನಡೆಸುತ್ತಿದ್ದ ಹಂದಿ ಫಾರಂನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಜ್ವರ ಪತ್ತೆಯಾಗಿರುವ ಫಾರಂನಲ್ಲಿದ್ದ ಎಲ್ಲ 10 ಹಂದಿಗಳೂ ಮೃತಪಟ್ಟಿವೆ ಎಂದು ಮೂಲಗಳು ತಿಳಿಸಿವೆ.

ಕೊಡಗು ಜಿಲ್ಲಾಧಿಕಾರಿ ಸತೀಶ ಬಿ.ಸಿ ಅವರು ಜಾನುವಾರು ರೋಗ ನಿಗಾ ಸಮಿತಿಯ ತಂಡವನ್ನು ಸ್ಥಳಕ್ಕೆ ಕಳುಹಿಸಿದ್ದು, ರೋಗ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಈಗಾಗಲೇ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಒಂದು ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗಪೀಡಿತ ವಲಯ ಎಂದು ಘೋಷಿಸಿದ್ದು, ಇಲ್ಲೆಲ್ಲ ತಪಾಸಣೆ ನಡೆಸಿದ್ದು, ಎಲ್ಲೂ ಹಂದಿಗಳು ಕಂಡು ಬಂದಿಲ್ಲ. ಇಲ್ಲಿಂದ 10 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಜಾಗೃತ ವಲಯ ಎಂದು ಘೋಷಿಸಿದ್ದು, ಹಂದಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಇಲ್ಲಿನ ಹಂದಿ ಸಾಕಾಣಿಕೆದಾರರು ಹೊಸದಾಗಿ ಹಂದಿಗಳನ್ನು ಖರೀದಿಸಬಾರದು, ಇಲ್ಲಿ ಕೆಲಸ ಮಾಡುವವರು ಬೇರೆ ಫಾರಂಗಳಿಗೆ ಹೋಗಬಾರದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪಶುಪಾಲನಾ ಇಲಾಖೆ ಅಧಿಕಾರಿಗಳು ‘ಆಫ್ರಿಕನ್ ಹಂದಿ ಜ್ವರ ಅಕ್ಟೋಬರ್ 3ರಂದು ಪತ್ತೆಯಾದ ಫಾರಂನಲ್ಲಿರುವ ಎಲ್ಲ ಹಂದಿಗಳೂ ಸತ್ತಿವೆ. ಒಂದು ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲೂ ಫಾರಂಗಳು ಇಲ್ಲ. ಮುನ್ನಚ್ಚರಿಕಾ ಕ್ರಮವಾಗಿ ಅತೀವ ನಿಗಾ ವಹಿಸಲಾಗಿದೆ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿಂದರೆ ಮನುಷ್ಯರಿಗೆ ಈ ರೋಗ ಬರುವ ಸಾಧ್ಯತೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂಜಾಗ್ರತಾ ಕ್ರಮ; ಜಾತ್ರೆ, ಸಂತೆ ನಿಷೇಧ
ಕೊಡಗು ಜಿಲ್ಲೆಯ ಗಡಿ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ ಹಾಗೂ ಹಾಸನಗಳಲ್ಲಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗವು ಪತ್ತೆಯಾಗಿರುವುದರಿಂದ ಜಿಲ್ಲೆಯಲ್ಲೂ ಮುನ್ನಚ್ಚರಿಕೆ ವಹಿಸಲಾಗಿದೆ. ನವೆಂಬರ್ 21ರವರೆಗೂ ಜಿಲ್ಲೆಯಲ್ಲಿ ಜಾನುವಾರು ಸಂತೆ ಹಾಗೂ ಜಾನುವಾರು ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಯಾವುದೇ ಜಾನುವಾರಿನಲ್ಲೂ ಚರ್ಮಗಂಟು ರೋಗ ಪತ್ತೆಯಾಗಿಲ್ಲದೇ ಇದ್ದರೂ ಮುನ್ನಚ್ಚರಿಕೆ ಕ್ರಮವಾಗಿ 10 ಸಾವಿರ ಡೋಸೆಜ್ ಆಡು ಸಿಡುಬಿನ ಲಸಿಕೆಯನ್ನು ತರಿಸಲಾಗಿದೆ. ಇವುಗಳನ್ನು ಗಡಿಭಾಗಗಳಾದ ಕುಶಾಲನಗರ, ಸೋಮವಾರಪೇಟೆ ತಾಲ್ಲೂಕುಗಳಿಗೆ ಹಂಚಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT