ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 173 ಸೇರಿ ರಾಜ್ಯದಲ್ಲಿ 195 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ195 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,68,388ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ195 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,68,388ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40254 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 173 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1874287ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 233 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,26,177ಕ್ಕೆ ಏರಿಕೆಯಾಗಿದೆ. ಇನ್ನು 1915 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran-Israel War: ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ IRGC ಗುಪ್ತಚರ ಮುಖ್ಯಸ್ಥ ಸಾವು

ಟ್ರಂಪ್ ವಾರ್ನಿಂಗ್ ಬೆನ್ನಲ್ಲೇ ವಸತಿ ಕಟ್ಟಡಕ್ಕೆ ವಾಯುದಾಳಿ: ಇರಾನ್ ನಲ್ಲಿ 13 ಮಂದಿ ಸಾವು!

ಶತ್ರು ನೆಲದಲ್ಲಿ ಅಸಾಧಾರಣ ರಕ್ಷಣೆ: ಇರಾನ್‌ನಲ್ಲಿ ಪೈಲಟ್ ರಕ್ಷಿಸಿದ ಅಮೆರಿಕ (ಜಾಗತಿಕ ಜಗಲಿ)

IPL 2026: ಇಲ್ಲಿಯವರೆಗೂ ನೋಡಿರದ ಆರ್ ಸಿಬಿಯ 'funniest moment': ವಿಡಿಯೋ ವೈರಲ್

West-Asia war: ಹಾರ್ಮುಜ್ ಮತ್ತೆಂದೂ ಹಿಂದಿನ ಸ್ಥಿತಿಗೆ ಮರಳಲ್ಲ, ನೆತನ್ಯಾಹು ಮಾತು ಕೇಳಿದರೆ ಹೊತ್ತಿ ಉರಿಯುತ್ತೀರಿ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ

SCROLL FOR NEXT