ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಅಪಾರ್ಟ್'ಮೆಂಟ್ 25ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ಅಪಾರ್ಟ್'ಮೆಂಟ್ 25ನೇ ಮಹಡಿಯಿಂದ ಬಿದ್ದು ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಕೋಣನಕುಂಟೆಯಲ್ಲಿ ಗುರುವಾರ ನಡೆದಿದೆ.

ಬೆಂಗಳೂರು: ಅಪಾರ್ಟ್'ಮೆಂಟ್ 25ನೇ ಮಹಡಿಯಿಂದ ಬಿದ್ದು ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಕೋಣನಕುಂಟೆಯಲ್ಲಿ ಗುರುವಾರ ನಡೆದಿದೆ. 

ಪ್ರಶಾಂತ್ ಸಿಂಗ್ (28) ಮೃತ ವ್ಯಕ್ತಿಯಾಗಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಮೃತ ಪ್ರಶಾಂತ್ ಮದ್ಯವ್ಯಸನಿಯಾಗಿದ್ದು, ಮದ್ಯ ಸೇವನೆಯನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಮನೆಯವರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ. ಸಾವನ್ನಪ್ಪಿದ ರಾತ್ರಿ ಕೂಡ ಕುಟುಂಬದ ಸದಸ್ಯರೊಂದಿಗೆ ಜಗಳವಾಡಿದ್ದಾನೆ. ಜಗಳದ ಬಳಿಕ ರೂಮಿಗೆ ಬಂದ ಪ್ರಶಾಂತ್ ಕಿಟಕಿಯಿಂದ ಜಿಗಿದಿದ್ದಾನೆಂದು ತಿಳಿದುಬಂದಿದೆ. 

ಘಟನೆ ಸಂಬಂಧ ವ್ಯಕ್ತಿಯ ಸಂಬಂಧಿ ಬ್ರಹ್ಮ ದೇವ್ ಸಿಂಗ್ ದೂರು ನೀಡಿದ್ದು, ದೂರು ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆದರೆ, ಕುಟುಂಬಸ್ಥರು ಮಾತ್ರ ಯಾರೊಬ್ಬರ ಮೇಲೂ ಆರೋಪ ಮಾಡಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

ಸಿಆರ್‌ಪಿಸಿಯ ಸೆಕ್ಷನ್ 174 ರ ಅಡಿಯಲ್ಲಿ ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಕಿಮ್ಸ್) ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!