ಶಿವಮೂರ್ತಿ ಮುರುಘಾ ಶರಣ 
ರಾಜ್ಯ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ವೊಂದನ್ನು ಚಿತ್ರದುರ್ಗ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ವೊಂದನ್ನು ಚಿತ್ರದುರ್ಗ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಶಿವಮೂರ್ತಿ ಮುರುಘಾ ಶರಣರು, ಹಾಸ್ಟೆಲ್ ವಾರ್ಡನ್ ಹಾಗೂ ಮತ್ತೋರ್ವರ ವಿರುದ್ಧ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಧೀಶರ ಮುಂದೆ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. 

ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ನೆರವಿನೊಂದಿಗೆ ಇಬ್ಬರು ಅಪ್ರಾಪ್ತ ಬಾಲಕಿಯರು ಮೈಸೂರಿನಲ್ಲಿ ದೂರು ದಾಖಲಿಸಿದ ನಂತರ ಪೋಕ್ಸೊ ಕಾಯ್ದೆ ಮತ್ತು ಅತ್ಯಾಚಾರ ಆರೋಪದಲ್ಲಿ ಮುರುಘಾ ಮಠಾಧೀಶರಾಗಿದ್ದ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಸೆಪ್ಚೆಂಬರ್ 1 ರಂದು ಬಂಧಿಸಿದರು.

ಆಶ್ರಮದ ಹಾಸ್ಟೆಲ್ ನಲ್ಲಿದ್ದ ಬಾಲಕಿಯರು, ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೇಳಿಕೆ ನೀಡಿದ್ದರು. ಇಲ್ಲಿಯವರೆಗೂ ಸ್ವಾಮೀಜಿ ವಿರುದ್ಧ ಮೂರು ಎಫ್ ಐ ಆರ್ ದಾಖಲಾಗಿದೆ. ಮೂರನೇ ಎಫ್ ಐಆರ್ ನಲ್ಲಿ ಸ್ವಾಮೀಜಿ, ಹಾಸ್ಟೆಲ್ ವಾರ್ಡನ್ ಸೇರಿದಂತೆ ಆರು ಮಂದಿಯನ್ನು ಆರೋಪಿಗಳನ್ನಾಗಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ