ನಂದಿನಿ ಹಾಲಿನ ಪ್ಯಾಕೆಟ್​ ಮೇಲೆ ಗಂಧದಗುಡಿ ಹೆಸರು 
ರಾಜ್ಯ

ನಂದಿನಿ ಹಾಲಿನ ಪ್ಯಾಕೆಟ್​ ಮೇಲೆ ಗಂಧದಗುಡಿ ಹೆಸರು; ಕೆಎಂಎಫ್​ನಿಂದ ಅಪ್ಪುಗೆ ವಿಶೇಷ ಗೌರವ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಗಂಧದಗುಡಿ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಅಪ್ಪು ಕನಸಿನ ಗಂಧದಗುಡಿ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಗಂಧದಗುಡಿ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಅಪ್ಪು ಕನಸಿನ ಗಂಧದಗುಡಿ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಈ ಮಧ್ಯೆ, ಕೆಎಂಎಫ್ ಸಹ ಗಂಧದಗುಡಿ ಚಿತ್ರಕ್ಕೆ ತನ್ನ ಬೆಂಬಲ ನೀಡಿದ್ದು, ನಂದಿನಿ ಹಾಲಿನ ಪ್ಯಾಕೆಟ್​ ಮೇಲೆ ಗಂಧದಗುಡಿ ಹೆಸರು ಮುದ್ರಿಸುವ ಮೂಲಕ ಅಪ್ಪುಗೆ ವಿಶೇಷ ಗೌರವ ಸಲ್ಲಿಸಿದೆ.

ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು ಕೆಎಂಎಫ್ ನಿರ್ಧರಿಸಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕೆಎಂಎಫ್ ಈ ರೀತಿ ಗೌರವಿಸಲು ನಿರ್ಧರಿಸಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ.

ಈ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಕೆಎಂಎಫ್ ಅಂಬಾಸಿಡರ್ ಆಗಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಮುಂದಾಗಿದೆ.

ರಾಜ್ಯಾದ್ಯಂತ ಗಂಧದಗುಡಿ ಸಾಕ್ಷ್ಯಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಥಿಯೇಟರ್ ಗಳಲ್ಲಿ ಗಂಧದಗುಡಿ ಪ್ರದರ್ಶನ ಕಂಡಿದೆ. ಅಭಿಮಾನಿಗಳು ದೊಡ್ಮನೆ ಹುಡುಗನನ್ನ ಕಣ್ತುಂಬಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ