ರಾಜ್ಯ

ಎಫ್‍ಎಂಸಿಜಿ ಕ್ಲಸ್ಟರ್ ನಿಂದ ರಾಜ್ಯದಲ್ಲಿ ಅಭಿವೃದ್ಧಿ ಪರ್ವ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Manjula VN

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಸ್ಥಾಪನೆಯಾಗುತ್ತಿರುವ ಫಾಸ್ಟ್ ಮೂವಿಂಗ್ ಕನ್ಸ್ಯೂಮರ್ ಗೂಡ್ಸ್ (ಎಫ್‌ಎಂಸಿಜಿ) ಕ್ಲಸ್ಟರ್ ದಕ್ಷಿಣ ಭಾರತದ ಅಭಿವೃದ್ಧಿಗೆ ಮಾದರಿಯಾಗಲಿದ್ದು, 1,200 ಕೋಟಿ ರೂ. ಬಂಡವಾಳ ಆಕರ್ಷಿಸಿ ಲಕ್ಷಾಂತರ ಜನರಿಗೆ ಉದ್ಯೋಗ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ಫಾಸ್ಟ್ ಮೂವಿಂಗ್ ಕನ್ಸ್ಯೂಮರ್ ಗೂಡ್ಸ್ ಕ್ಲಸ್ಟರ್ ಹೂಡಿಕೆದಾರರ ಸಮಾವೇಶದಲ್ಲಿ ಅವರು ಮಾತನಾಡಿದರು. “ನಾವೆಷ್ಟು ಹೂಡಿಕೆ ಮಾಡುತ್ತಿದ್ದೇವೆಂಬುದು ಮುಖ್ಯವಲ್ಲ, ಆದರೆ ಎಷ್ಟು ಜನರಿಗೆ ಉದ್ಯೋಗ ನೀಡಿದ್ದೇವೆಂಬುದು ಮುಕ್ಯ. ಬಲವಾದ ಉದ್ಯೋಗಿಗಳನ್ನು ಹೊಂದಿರುವ ದೇಶಗಳು ಬಡತನದಿಂದ ಬಳಲುತ್ತಿಲ್ಲ ಎಂದು ಅವರು ಹೇಳಿದರು.

ಧಾರವಾಡ ಸೇರಿದಂತೆ ರಾಜ್ಯದ ನಾಲ್ಕು ಸ್ಥಳಗಳಿಗೆ ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾನಮಾನ ನೀಡಲಾಗುವುದು. ಈ ಸಂಬಂಧ ಕರಡು ಸಿದ್ಧವಾಗಿದ್ದು, ಸಂಪುಟ ಸಭೆಯಲ್ಲಿ ಅಗತ್ಯ ಅನುಮತಿ ಪಡೆಯಲಾಗುವುದು. ಕರ್ನಾಟಕ ಹಲವು ಕ್ಷೇತ್ರಗಳಲ್ಲಿ ಮುಂದಿದೆ. 500 ಆರ್ & ಡಿ ಕಂಪನಿಗಳಲ್ಲಿ ಸುಮಾರು 400 ರಾಜ್ಯದಲ್ಲಿವೆ. ಆರ್ & ಡಿ ನೀತಿಗೆ ತಿದ್ದುಪಡಿಗಳನ್ನು ತರಲು ನಾವು ಸಿದ್ಧರಾಗಿದ್ದೇವೆ. ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ ನೀಡಲು ಹುಬ್ಬಳ್ಳಿ-ಧಾರವಾಡದಲ್ಲಿ 100 ಎಕರೆಯನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು.

ಉತ್ತರ ಕರ್ನಾಟಕದಲ್ಲಿ, ಯುವಕರು ಶಿಕ್ಷಣದ ಜೊತೆಗೆ ಉದ್ಯೋಗವನ್ನು ಪಡೆಯಬೇಕು ಮತ್ತು ಅದನ್ನು ಸಾಧಿಸಲು ಅವರಿಗೆ ಕೌಶಲ್ಯ ಆಧಾರಿತ ತರಬೇತಿಯ ಅಗತ್ಯವಿದೆ. ಉದ್ಯೋಗವನ್ನು ಹೆಚ್ಚಿಸಲು ಕೈಗಾರಿಕೆಗಳ ಅಗತ್ಯವಿದೆ. ಶೀಘ್ರದಲ್ಲೇ ಈ ಸಂಬಂಧ ಇರುವ ಸಮಸ್ಯೆಗಳನ್ನು ನಿವಾರಿಸಲಾಗುತ್ತದೆ. 'ರಾಜ್ಯದ ಕೆಲ ರೈಲ್ವೆ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕು ನೀಡಲಾಗಿದೆ. ಈಗಾಗಲೇ ತುಮಕೂರು- ದಾವಣಗೆರೆ ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಧಾರವಾಡ- ಬೆಳಗಾವಿ ರೈಲು ಮಾರ್ಗಕ್ಕೆ ಬೇಕಾದ ಭೂಸ್ವಾಧಿಧೀನ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ಯೋಜನೆಗೂ ಶೀಘ್ರದಲ್ಲೇ ಹಸಿರು ನಿಶಾನೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

SCROLL FOR NEXT