2023ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಶನಿವಾರ ಪ್ರಕಟಿಸಿದೆ.
ಬೆಂಗಳೂರು: 2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಶನಿವಾರ ಪ್ರಕಟಿಸಿದೆ.
ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಏಪ್ರಿಲ್ 1 ರಿಂದ ಏಪ್ರಿಲ್ 15 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಇಂದು ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 2ರ ವರೆಗೆ ಅವಕಾಶ ನೀಡಲಾಗಿದೆ.
ಏಪ್ರಿಲ್ 1 ರಂದು ಪ್ರಥಮ ಭಾಷೆ, ಏಪ್ರಿಲ್ 4 ರಂದು ಗಣಿತ, ಏಪ್ರಿಲ್ 6 ರಂದು ದ್ವಿತೀಯ ಭಾಷೆ, ಏಪ್ರಿಲ್ 10ಕ್ಕೆ ವಿಜ್ಞಾನ, ಏಪ್ರಿಲ್ 12 ರಂದು ತೃತೀಯ ಭಾಷೆ, ಏಪ್ರಿಲ್ 15 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.