ಚಲಿಸುತ್ತಿದ್ದ ಕಾರಿನಲ್ಲಿ ಸಿಡಿಯುತ್ತಿದ್ದ ಪಟಾಕಿಗಳು 
ರಾಜ್ಯ

ಚಲಿಸುತ್ತಿದ್ದ ಕಾರಿನಲ್ಲೇ ಸ್ಕೈ ಶಾಟ್‌ ಪಟಾಕಿಗಳನ್ನು ಸಿಡಿಸಿದ ಯುವಕನನ್ನು ಬಂಧಿಸಿದ ಪೊಲೀಸರು

ಉಡುಪಿ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರಿನಿಂದ ಸ್ಕೈ ಶಾಟ್ ಪಟಾಕಿಗಳನ್ನು ಸಿಡಿಸುವ ಮೂಲಕ ಸಾರ್ವಜನಿಕ ಸುರಕ್ಷತೆಗೆ ಅಪಾಯ ತಂದೊಡ್ಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಉಡುಪಿ: ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರಿನಿಂದ ಸ್ಕೈ ಶಾಟ್ ಪಟಾಕಿಗಳನ್ನು ಸಿಡಿಸುವ ಮೂಲಕ ಸಾರ್ವಜನಿಕ ಸುರಕ್ಷತೆಗೆ ಅಪಾಯ ತಂದೊಡ್ಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಆತನ ಕಾರನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ವಿಶಾಲ್ ಕೊಹ್ಲಿ ಎಂಬಾತನನ್ನು ಮಣಿಪಾಲ ನಗರದಲ್ಲಿ ಬಂಧಿಸಲಾಗಿದೆ. ಯುವಕ ತನ್ನ ಕಾರಿನ ಮೇಲೆ ಸ್ಕೈ ಶಾಟ್ ಪಟಾಕಿಗಳನ್ನು ಇಟ್ಟು ಸಿಡಿಸಿದ್ದ. ಈತ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುತ್ತಿದ್ದಂತೆ ಸ್ಕೈ ಶಾಟ್ ಪಟಾಕಿಗಳು ಒಂದರ ಹಿಂದೆ ಒಂದರಂತೆ ಸಿಡಿಯುತ್ತಲೇ ಇದ್ದವು.

ಪೆಟ್ರೋಲ್ ಪಂಪ್‌ನ ಹತ್ತಿರ ಕಾರು ಅಪಾಯಕಾರಿಯಾಗಿ ಚಲಿಸಿದಾಗ ಕೊಹ್ಲಿ ಮತ್ತು ಇತರ ಸಾರ್ವಜನಿಕರು ಸ್ವಲ್ಪದರಲ್ಲೇ ಪಾರಾಗಿದ್ದರು. ವಿಶಾಲ್ ಅವರ ಕೃತ್ಯದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಅದರ ಬಗ್ಗೆ ಕಳವಳ ವ್ಯಕ್ತಪಡಿಸುವುದರೊಂದಿಗೆ ಕಮೆಂಟ್‌ಗಳ ಸುರಿಮಳೆಗೈದಿದ್ದಾರೆ.

ಗುರುವಾರ ಘಟನೆ ನಡೆದಿದ್ದು, ವಿಶಾಲ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಂತೆ ನಾಪತ್ತೆಯಾಗಿದ್ದಾರೆ. ಮಣಿಪಾಲ ಪೊಲೀಸರು ಆತನನ್ನು ಪತ್ತೆ ಹಚ್ಚಿ ಇಂದು ಬೆಳಗ್ಗೆ ಬಂಧಿಸಿದ್ದಾರೆ. ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT