ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 114 ಸೇರಿ ಇಂದು ರಾಜ್ಯದಲ್ಲಿ 185 ಪ್ರಕರಣ ಪತ್ತೆ; ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 185 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,68,911ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 185 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,68,911ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾರು ಮೃತಪಟ್ಟಿಲ್ಲ. ಇನ್ನು ರಾಜ್ಯದಲ್ಲಿ ಸೊಂಕಿಗೆ ಇಲ್ಲಿಯವರೆಗೂ 40,256 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 114 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,74,629ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 83 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,26,529ಕ್ಕೆ ಏರಿಕೆಯಾಗಿದೆ. ಇನ್ನು 2,084 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!