ಹಿರಿಯ ನಟರಾದ ದತ್ತಣ್ಣ, ಅವಿನಾಶ್ 
ರಾಜ್ಯ

ಹಿರಿಯ ನಟ ದತ್ತಣ್ಣ, ಅವಿನಾಶ್ ಸೇರಿದಂತೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ

ಈ ಬಾರಿ ಚಲನಚಿತ್ರ ಕ್ಷೇತ್ರದಲ್ಲಿ ದತ್ತಣ್ಣ, ಅವಿನಾಶ್, ಕಿರುತೆರೆ ಕ್ಷೇತ್ರದಲ್ಲಿ ಸಿಹಿಕಹಿ ಚಂದ್ರು, ಲೇಖಕ ಅ.ರಾ. ಮಿತ್ರಾ ಸೇರಿದಂತೆ 67 ಸಾಧಕರು ಹಾಗೂ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ಆದೇಶಿಸಿದೆ. 

ಬೆಂಗಳೂರು: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳು, ಸಂಸ್ಥೆಗಳಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯವನ್ನು ಸರ್ಕಾರ ಅನುಸರಿಸಿಕೊಂಡು ಬಂದಿದ್ದು, ಈ ಬಾರಿ ಚಲನಚಿತ್ರ ಕ್ಷೇತ್ರದಲ್ಲಿ ದತ್ತಣ್ಣ, ಅವಿನಾಶ್, ಕಿರುತೆರೆ ಕ್ಷೇತ್ರದಲ್ಲಿ ಸಿಹಿಕಹಿ ಚಂದ್ರು, ಲೇಖಕ ಅ.ರಾ. ಮಿತ್ರಾ ಸೇರಿದಂತೆ 67 ಸಾಧಕರು ಹಾಗೂ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ಆದೇಶಿಸಿದೆ. 

ಪತ್ರಿಕೋದ್ಯಮ- ಬೆಂಗಳೂರಿನ ಹೆಚ್.ಆರ್. ಶ್ರೀಶಾ, ಗದಗ ಜಿಲ್ಲೆಯ ಜಿ.ಎಂ. ಶಿರಹಟ್ಟಿ, ವಿಜ್ಞಾನ ಮತ್ತು ತಂತ್ರಜ್ಞಾನ- ಬೆಂಗಳೂರಿನ ಇಸ್ರೋ ಸಂಸ್ಥೆ ಮಾಜಿ ನಿರ್ದೇಶಕ ಕೆ. ಶಿವನ್, ರಾಯಚೂರಿನ ಡಾ. ಡಿ.ಆರ್ ಬಳೂರಗಿ, ಕೃಷಿ- ಕೊಡಗಿನ ಗಣೇಶ್ ತಿಮ್ಮಯ್ಯ, ಚಿಕ್ಕಮಗಳೂರಿನ ಚಂದ್ರಶೇಖರ್ ನಾರಾಯಣಪುರ, ಪರಿಸರ- ರಾಮನಗರದ ಸಾಲುಮರದ ನಿಂಗಣ್ಣ, ಪೌರಕಾರ್ಮಿಕ - ಮಲ್ಲಮ್ಮ ಹೂವಿನ ಹಡಗಲಿ, ಆಡಳಿತ- ಡಾ. ಎಲ್.ಎಚ್. ಮಂಜುನಾಥ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಶಿವಮೊಗ್ಗ, ಮಧನ್ ಗೋಪಾಲ್ ಬೆಂಗಳೂರು ಮತ್ತಿತರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

"೨೦೨೧-೨೨ನೇ ಸಾಲಿನ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ'ಗೆ ಆಯ್ಕೆಯಾಗಿರುವ ಎಲ್ಲ ಸಾಧಕರು ಹಾಗೂ  'ಅಮೃತ ಮಹೋತ್ಸವ ರಾಜ್ಯಪ್ರಶಸ್ತಿ' ಪುರಸ್ಕೃತ ರಾಜ್ಯದ ೧೦ ಸಂಘ-ಸಂಸ್ಥೆಗಳನ್ನು ಅಭಿನಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಎಲ್ಲ ಸಾಧಕರ ಸಾಧನೆಗಳು ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಆಶಿಸಿದ್ದಾರೆ. ಹಾಗೆಯೇ, ಸಾಧಕರನ್ನು ಗುರುತಿಸುವಲ್ಲಿ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸಿರುವ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel