ನಟಿ ವಿನಯ ಪ್ರಸಾದ್(ಸಂಗ್ರಹ ಚಿತ್ರ) 
ರಾಜ್ಯ

ಹಿರಿಯ ನಟಿ ವಿನಯ ಪ್ರಸಾದ್ ಮನೆಯಲ್ಲಿ ಕಳ್ಳತನ: ಬೀಗ ಮುರಿದು ಒಳನುಗ್ಗಿದ ಕಳ್ಳರು ನಗದು ಕದ್ದು ಪರಾರಿ

ಕನ್ನಡದ ಹಿರಿಯ ನಟಿ ವಿನಯ ಪ್ರಸಾದ್ ಮನೆಯೊಳಗೆ ನುಗ್ಗಿದ ಕಳ್ಳರು ಕೈಚಳಕ ತೋರಿಸಿದ್ದಾರೆ. ವಿನಯಪ್ರಸಾದ್​ ಅವರ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿರುವ ನಿವಾಸಕ್ಕೆ ಕಳೆದ ಅಕ್ಟೋಬರ್ 22ರಂದು ಮನೆ ಬೀಗ ಒಡೆದು ನುಗ್ಗಿರುವ ಕಳ್ಳರು ಲಾಕರ್​ನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ಬೆಂಗಳೂರು: ಕನ್ನಡದ ಹಿರಿಯ ನಟಿ ವಿನಯ ಪ್ರಸಾದ್(Actress Vinaya Prasad) ಮನೆಯೊಳಗೆ ನುಗ್ಗಿದ ಕಳ್ಳರು ಕೈಚಳಕ ತೋರಿಸಿದ್ದಾರೆ. ವಿನಯಪ್ರಸಾದ್​ ಅವರ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿರುವ ನಿವಾಸಕ್ಕೆ ಕಳೆದ ಅಕ್ಟೋಬರ್ 22ರಂದು ಮನೆ ಬೀಗ ಒಡೆದು ನುಗ್ಗಿರುವ ಕಳ್ಳರು ಲಾಕರ್​ನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ದೀಪಾವಳಿ ಹಬ್ಬಕ್ಕೆಂದು ಉಡುಪಿಗೆ ತೆರಳಿದ್ದ ನಟಿ ಮೊನ್ನೆ 26ರಂದು ಮನೆಗೆ ಹಿಂದಿರುಗಿದ್ದರು. ಈ ವೇಳೆ ಮನೆಯಲ್ಲಿ ಕಳ್ಳತನವಾಗಿರುವುದನ್ನು ಪತ್ತೆಯಾಗಿದೆ. ಕೂಡಲೇ ನಂದಿನಿ ಲೇಔಟ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಅ 26ರ ಸಂಜೆ 4.30ಕ್ಕೆ ನಟಿ ಮನೆಗೆ ಹಿಂದಿರುಗಿದ್ದರು. ಮನೆಯ ಬಾಗಿಲಿನ ಬೀಗ ಒಡೆದು ಕಳ್ಳರು ಮನೆಯೊಳಗೆ ನುಗ್ಗಿ ಮನೆಯ ರೂಂನ ಲಾಕರ್​ನಲ್ಲಿಟ್ಟಿದ್ದ ನಗದನ್ನು ದೋಚಿದ್ದಾರೆ. ಏರಿಯಾದ ಹಳೇ ಕಳ್ಳರ ಗ್ಯಾಂಗ್, ಸುಲಿಗೆಕೋರರು ಹಾಗೂ ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ನಂದಿನಿ ಲೇ ಔಟ್ ನ 4ನೇ ಹಂತದ ರೈಲ್ವೆ ಮೆನ್ಸ್ ಕಾಲೊನಿಯಲ್ಲಿ ವಿನಯ ಪ್ರಸಾದ್ ತಮ್ಮ ಪತಿ ಪ್ರಕಾಶ್ ಜೊತೆ ವಾಸವಾಗಿದ್ದಾರೆ. ಅಪರಿಚಿತ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ