ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಟ್ರ್ಯಾಕ್ಟರ್ ಮಗುಚಿ ಬಿದ್ದು ಮೂವರು ಸಾವು

ಜೋಳ ಬಿಡಿಸುವ ಟ್ರ್ಯಾಕ್ಟರ್ ಮಗುಚಿ ಬಿದ್ದು ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ನೆರಗ್ಯಾತನಹಳ್ಳಿಯಲ್ಲಿ ನಡೆದಿದೆ.

ಮೈಸೂರು: ಜೋಳ ಬಿಡಿಸುವ ಟ್ರ್ಯಾಕ್ಟರ್ ಮಗುಚಿ ಬಿದ್ದು ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ನೆರಗ್ಯಾತನಹಳ್ಳಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಟಿ ನರಸೀಪುರ ತಾಲ್ಲೂಕಿನ ಬೂದಹಳ್ಳಿ ಗ್ರಾಮದ ನಿವಾಸಿಗಳಾದ ಲೇ ಗವಿಸಿದ್ಧಯ್ಯ ಎಂಬುವವರ ಪುತ್ರ ಮರಿಜೋಗಿ(45 ವ), ಮಹದೇವ ಎಂಬುವವರ ಪುತ್ರ ಪ್ರಕಾಶ್ ಹಾಗೂ ನಾಗರಾಜ್ ಎಂಬುವವರ ಪುತ್ರ ಸಂತೋಷ್ (19ವ) ಎಂದು ಗುರುತಿಸಲಾಗಿದೆ. 

ಚಿಟಗಯ್ಯನಕೊಪ್ಪಲು ಗ್ರಾಮದಿಂದ ನೆರಗ್ಯಾತನಹಳ್ಳಿಗೆ ಹೋಗುವ ಮಾರ್ಗದಲ್ಲಿ ಹುಲ್ಲಿನ ಜೋಳ ಬಿಡಿಸುವ ಟ್ರ್ಯಾಕ್ಟರ್ ನಲ್ಲಿ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿತ್ತು. ಅದರೊಳಗಿದ್ದ ಮೂವರು ಗಂಭೀರ ಗಾಯಗೊಂಡು ಮೃತಪಟ್ಟರು.

ಸ್ಥಳಕ್ಕೆ ಎಸ್ಪಿ ಆರ್ ಚೇತನ್, ಎಎಸ್ಪಿ ನಂದಿನಿ, ಡಿವೈಎಸ್ಪಿ ಗೋವಿಂದ ರಾಜು, ಸರ್ಕಲ್ ಇನ್ಸ್ ಪೆಕ್ಟರ್ ಕೃಷ್ಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿ ನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT