ಇನ್ಸ್ ಪೆಕ್ಟರ್ ನಂದೀಶ್ 
ರಾಜ್ಯ

ಇನ್ಸ್​ಪೆಕ್ಟರ್​ ನಂದೀಶ್​ ಸಾವು ಪ್ರಕರಣ: ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ

ಇನ್ಸ್ ಪೆಕ್ಟರ್  ನಂದೀಶ್ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬೆಂಗಳೂರು: ಇನ್ಸ್ ಪೆಕ್ಟರ್ ನಂದೀಶ್ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ವಿಧಾನಸೌಧದಲ್ಲಿಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲಿ ಸಂಪೂರ್ಣವಾಗಿ ವಿಸ್ತೃತ ತನಿಖೆ ಕೈಗೊಳ್ಳಲು ತಿಳಿಸಿದ್ದೇನೆ ಎಂದರು.

ಸಿದ್ದರಾಮಯ್ಯ ಅವರು ಸಾಲ ಪಡೆದಿರುವ ಬಗ್ಗೆ ಪತ್ರಿಕೆ ಯಲ್ಲಿ ಓದಿ ನನ್ನ ಗಮನಕ್ಕೆ ಬಂದಿದೆ. ಯಾವುದೇ ಆದರೂ ವ್ಯವಸ್ಥಿತವಾಗಿ ತನಿಖೆಯಾಗಬೇಕು. ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ಕೊಟ್ಟರೆ ಆ ಪ್ರಕ್ರಿಯೆ ಯನ್ನು ಪ್ರಾರಂಭ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ನಾನು ವಿರೋಧ ಪಕ್ಷದ ರೀತಿಯಲ್ಲಿ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಅವರಿಗೆ ಆಧಾರ ರಹಿತ ವಾಗಿ ವ್ಯಾಖ್ಯಾನ ಮಾಡುವ ರೂಢಿ ಇದೆ. ನಾನು ಹಾಗೆ ಮಾಡುವುದಿಲ್ಲ. ಸತ್ಯ ಹೊರಗೆ ಬರಲಿ ಎಂದರು. 

ಈ ಮಧ್ಯೆ  ಸೋಲಾರ್ ಹಗರಣ ತನಿಖೆಯಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಕಾದು ನೋಡಿ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್