ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ನಾಳೆ ನಾಡಿನಾದ್ಯಂತ ರಾಜ್ಸೋತ್ಸವ, ಸಂಜೆ ಪುನೀತ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

ನಾಳೆ ನಾಡಿನಾದ್ಯಂತ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಸಂಜೆ ವಿಧಾನಸೌಧದ ಮುಂಭಾಗ ನಡೆಯುವ ಸಮಾರಂಭದಲ್ಲಿ ಇತ್ತೀಚಿಗೆ ನಿಧನರಾದ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ನಾಳೆ ನಾಡಿನಾದ್ಯಂತ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಸಂಜೆ ವಿಧಾನಸೌಧದ ಮುಂಭಾಗ ನಡೆಯುವ ಸಮಾರಂಭದಲ್ಲಿ ಇತ್ತೀಚಿಗೆ ನಿಧನರಾದ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು, ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮುಖ್ಯಮಂತ್ರಿ ಮನವಿ ಮಾಡಿದರು.

ನವೆಂಬರ್ 2 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ  ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ಜಗತ್ತಿನಾದ್ಯಂತ ಪ್ರಮುಖ ಉದ್ದಿಮೆಗಳು, ಉದ್ದಿಮೆಗಳ ಪ್ರತಿನಿಧಿಗಳು ಆಗಮಿಸಲಿದ್ದಾರೆ. ಸುಮಾರು 5 ಲಕ್ಷ ಕೋಟಿ ರೂ.ಯಷ್ಟು ಹೂಡಿಕೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಹಲವು ಉದ್ದಿಮೆದಾರರು ಬಂದು ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ. ಅಂತಹವರಿಗೆ ಭರವಸೆ ಪತ್ರ ನೀಡಲಾಗುವುದು ಎಂದರು. 

 ಈ ಸಮಾವೇಶದಲ್ಲಿ ರಕ್ಷಣೆ, ಬಾಹ್ಯಾಕಾಶ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಗುತ್ತಿರುವ ಪ್ರಗತಿ ಹಾಗೂ ಮುಂದಿರುವ ಸವಾಲುಗಳ ಬಗ್ಗೆ ಚರ್ಚಾಗೋಷ್ಠಿಗಳು ನಡೆಯಲಿವೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪರಿಣಿತರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ರಾಜ್ಯ ಹೇಗೆ ಅಭಿವೃದ್ಧಿಯಾಗಲಿದೆ ಎಂಬುದಕ್ಕೆ ಬಂಡವಾಳ ಹೂಡಿಕೆದಾರರ ಸಮಾವೇಶ ದಿಕ್ಸೂಚಿಯಾಗಲಿದೆ. ಆಸಕ್ತರು ನೋಂದಾಯಿಸಿಕೊಂಡು ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ತಿಳಿಸಿದರು. 

ನವೆಂಬರ್ 11 ರಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿಲ್ ಉದ್ಘಾಟನೆಯಾಗಲಿದ್ದು, ಬೆಂಗಳೂರು ರೈಲು ನಿಲ್ದಾಣದಲ್ಲಿ ಚೆನ್ನೈ-ಬೆಂಗಳೂರು- ಮೈಸೂರು ನಡುವಿನ 'ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಅದರ ಜೊತೆಗೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರಗತಿ ಪ್ರತಿಮೆಯನ್ನು  ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ತದನಂತರ ಸಾರ್ವಜನಿಕ ಸಭೆಯೊಂದನ್ನು ಸಹ ಪ್ರಧಾನಿ ನಡೆಸಲಿದ್ದು, ಅದರಲ್ಲಿ ಎಲ್ಲರೂ ಭಾಗವಹಿಸುವಂತೆ ಬಸವರಾಜ ಬೊಮ್ಮಾಯಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT