ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 417 ಸೇರಿ ರಾಜ್ಯದಲ್ಲಿ 546 ಮಂದಿಗೆ ಪಾಸಿಟಿವ್; ಶೂನ್ಯ ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 546ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,52,100ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾರೂ ಮೃತಪಟ್ಟಿಲ್ಲ. ಇನ್ನು ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 40,201 ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 417 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,64,947ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,612 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,06,478ಕ್ಕೆ ಏರಿಕೆಯಾಗಿದೆ. ಇನ್ನು 5,379 ಸಕ್ರಿಯ ಪ್ರಕರಣಗಳಿವೆ.

SCROLL FOR NEXT