ಸಾಂದರ್ಭಿಕ ಚಿತ್ರ 
ರಾಜ್ಯ

ಓವರ್ ಟೇಕ್ ಮಾಡುವ ಹುಚ್ಚಾಟ: ಸಾರಿಗೆ ಸಂಸ್ಥೆ ಬಸ್ ಮತ್ತು 2 ಕಾರುಗಳ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರ ಸಾವು

ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ.

ವಿಜಯಪುರ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ.

ಕಲಬುರಗಿ ಮೂಲದ ಕಲಶೆಟ್ಟಿ ಕುಟುಂಬದವರಾದ ತಾಯಿ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ( 25) ಹಾಗೂ ಮಗು ಸುಮನ್ (3 ತಿಂಗಳು) ಕಾರಿನಲ್ಲೇ ಮೃತಪಟ್ಟರೇ ಶರಣಮ್ಮ ಬಸವರಾಜ್ ಕಲಶೆಟ್ಟಿ (55) ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಉಮೇಶ ಕಲಶೆಟ್ಟಿ ಮತ್ತು ಅವರ ಪತ್ನಿ ಸುರೇಖಾ ಹಾಗೂ ಮಕ್ಕಳಾದ ಸುಹಾನ್ (8 ತಿಂಗಳು) ಮತ್ತು ಸಾನ್ವಿ (2) ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟೆಯಿಂದ ವಿಜಯಪುರಕ್ಕೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಎದುರಿಗೆ ಬರುತ್ತಿದ್ದ ಎರಡು ಕಾರುಗಳಲ್ಲಿ ಒಂದು ಕಾರು ಓವರ್ ಟೇಕ್ ಮಾಡುವ ವೇಳೆ ಎರಡು ಕಾರುಗಳು ಬಸ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ  ತೀವ್ರವಾಗಿ ಗಾಯಗೊಂಡಿರುವ ಉಮೇಶ ಕಲಶಟ್ಟಿ, ಸುರೇಖಾ ಕಲಶಟ್ಟಿ ಇವರನ್ನು ತುರ್ತು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ  ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೊಲ್ಹಾರ ಪಿಎಸ್ಐ ಪ್ರೀತಮ್ ನಾಯಕ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ