ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಮುರುಘಾ ಶ್ರೀಗಳ ಪ್ರಕರಣದಲ್ಲಿ ಕಾನೂನು ಪ್ರಕಾರ ಎಲ್ಲಾ ನಡೆಯುತ್ತದೆ, ಈ ಸಂದರ್ಭದಲ್ಲಿ ಹೇಳಿಕೆ ಸರಿಯಲ್ಲ: ಸಿಎಂ ಬೊಮ್ಮಾಯಿ

ಮುರುಘಾ ಶ್ರೀಗಳ ಬಂಧನ ವಿಚಾರವಾಗಿ ಈ ಸಂದರ್ಭದಲ್ಲಿ ಮಾತನಾಡುವುದು, ಉತ್ತರ ಕೊಡುವುದು ಸರಿಯಲ್ಲ, ಕಾನೂನು ಪ್ರಕಾರವಾಗಿ ಎಲ್ಲಾ ನಡೆಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರು: ಮುರುಘಾ ಶ್ರೀಗಳ ಬಂಧನ ವಿಚಾರವಾಗಿ ಈ ಸಂದರ್ಭದಲ್ಲಿ ಮಾತನಾಡುವುದು, ಉತ್ತರ ಕೊಡುವುದು ಸರಿಯಲ್ಲ, ಕಾನೂನು ಪ್ರಕಾರವಾಗಿ ಎಲ್ಲಾ ನಡೆಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೊಲೀಸರಿಗೆ ನಾವು ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಹಾಗಾಗಿ ಕಾನೂನು ಪ್ರಕಾರವಾಗಿ ಎಲ್ಲವೂ ನಡೆಯುತ್ತದೆ. ಮುರುಘಾ ಶರಣರ ಬಂಧನ ಬಗ್ಗೆ ಈ ಹೊತ್ತಿನಲ್ಲಿ ಮಾತನಾಡುವುದು ಸರಿಯಲ್ಲ ಎಂದಷ್ಟೇ ಹೇಳಿದರು.

ಶ್ರೀಗಳ ಬಂಧನ ವಿಳಂಬವಾಯಿತು ಎಂಬ ಜನಸಾಮಾನ್ಯರ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಮಾತಿಗೂ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಎಲ್ಲಾ ಕಾನೂನು ಪ್ರಕಾರವೇ ನಡೆಯುತ್ತಿದೆ. ಈಗ ನಾನು ಮಾತನಾಡುವುದು ಸರಿಯಲ್ಲ. ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಅವರು ಸರಿಯಾದ ರೀತಿಯಲ್ಲಿ ಅವರ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ವ್ಯಾಖ್ಯಾನ ಸರಿಯಲ್ಲ ಎಂದರು. 

ಇಂದು ಮಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ಬೆಳಗ್ಗೆಯೇ ಮಂಗಳೂರಿಗೆ ತೆರಳಿದ್ದಾರೆ. ಇದಕ್ಕೂ ಮುನ್ನ ಬೆಳ್ಳಂಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ, ಮುರುಘಾ ಶರಣರ ಬಂಧನ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಿಎಸ್​ವೈ ತುರ್ತು ಭೇಟಿ ಮಾಡಿದ ಸಿಎಂ ಬೊಮ್ಮಾಯಿ, ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ಮೊನ್ನೆ ಪ್ರತಿಕ್ರಿಯೆ ನೀಡಿದ್ದ ಬಿ ಎಸ್ ಯಡಿಯೂರಪ್ಪ, ಸ್ವಾಮೀಜಿ ಸತ್ವ ಪರೀಕ್ಷೆ ಗೆದ್ದು ಬರುತ್ತಾರೆ ಎಂದು ನೈತಿಕ ಬೆಂಬಲ ನೀಡಿದ್ದರು. 

ಬೆಂಗಳೂರಿಗೆ ಶಿಫ್ಟ್?: ಮುರುಘಾಶ್ರೀ ಕಳೆದ ಮಧ್ಯರಾತ್ರಿ ಚಿತ್ರದುರ್ಗ ಜೈಲು ಸೇರಿದ್ದು ರಾತ್ರಿಯಿಡೀ ಜೈಲಿನಲ್ಲಿ ನಿದ್ದೆಯಿಲ್ಲದೆ ಕಳೆದಿದ್ದರು. ಅವರಿಗೆ ನಸುಕಿನಲ್ಲಿ ಎದೆನೋವು, ಲೋ ಬಿಪಿ ಕಂಡುಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಹಾಜರಾಗಿದ್ದಾರೆ. ಅವರನ್ನು ಹೆಚ್ಚಿನ ತಪಾಸಣೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ  ಶಿಫ್ಟ್ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!