ರಾಜ್ಯ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪೇಟಿಎಂ, ಕ್ಯಾಶ್‌ಫ್ರೀ, ರೇಜರ್‌ಪೇನ ಬೆಂಗಳೂರು ಕಚೇರಿಗಳ ಮೇಲೆ ಇ.ಡಿ ದಾಳಿ!

Nagaraja AB

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬೆಂಗಳೂರಿನಲ್ಲಿ ಚೀನೀ ವ್ಯಕ್ತಿಗಳು ನಿಯಂತ್ರಿಸಲ್ಪಡುತ್ತಿದ್ದ ನಗರದಲ್ಲಿರುವ ರೇಜರ್ ಪೇ, ಪೇಟಿಎಂ, ಕ್ಯಾಶ್ ಫ್ರೀಗೆ ಸಂಬಂಧಿಸಿದಂತೆ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. 

ಚೀನಿ ಲೋನ್ ಆ್ಯಪ್ ಗೆ ಸಂಬಂಧಿಸಿದ ರಾಜಧಾನಿಯ ಆರು ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಚೀನೀ ವ್ಯಕ್ತಿಗಳು ನಿಯಂತ್ರಿಸುತ್ತಿದ್ದ ಈ ಘಟಕಗಳ ವ್ಯಾಪಾರಿ ಐಡಿಗಳು ಮತ್ತು ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 17 ಕೋಟಿ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಾಚರಣೆ ವೇಳೆಯಲ್ಲಿ ಪೇಮೆಂಟ್ ಗೇಟ್ ವೇ ಗಳು, ಬ್ಯಾಂಕ್ ಗಳೊಂದಿಗೆ ಹೊಂದಿರುವ ವಿವಿಧ ವ್ಯಾಪಾರಿ ಐಡಿಗಳು, ಖಾತೆಗಳ ಮೂಲಕ ತಮ್ಮ ಅಕ್ರಮ ವ್ಯವಹಾರ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅವರು ನಕಲಿ ದಾಖಲೆಗಳನ್ನು ಬಳಸುತ್ತಿರುವುದಾಗಿ ಇಡಿ ಹೇಳಿದೆ. 

ಮೊಬೈಲ್ ಆ್ಯಪ್ ಮೂಲಕ ಸಣ್ಣ ಮೊತ್ತದ ಸಾಲ ಪಡೆದ ಸಾರ್ವಜನಿಕರಿಗೆ ಸುಲಿಗೆ ಮತ್ತು ಕಿರುಕುಳ ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಘಟಕಗಳು, ವ್ಯಕ್ತಿಗಳ ವಿರುದ್ಧ ಬೆಂಗಳೂರು ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾದ 18 ಎಫ್ ಐಆರ್ ಗಳ ಆಧಾರದ ಮೇಲೆ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.

SCROLL FOR NEXT