ರಾಜ್ಯ

ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಯಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ!

Vishwanath S

ಬೆಂಗಳೂರು: ಮುಂದಿನ 24 ಘಂಟೆಗಳಲ್ಲಿ ದಕ್ಷಿಣ ಒಳನಾಡು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಿಗೂ 5 ದಿನ ಯಲ್ಲೋ ಅಲರ್ಟ್ ಇರಲಿದೆ. ಹಾಗೂ ಬೆಂಗಳೂರಿಗೆ ಇಂದಿನಿಂದ 3 ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಸೆ. 9ರವರೆಗೆ ಕರಾವಳಿ, ಮಲೆನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

SCROLL FOR NEXT