ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 276 ಸೇರಿ ರಾಜ್ಯದಲ್ಲಿಂದು 484 ಹೊಸ ಪ್ರಕರಣ ಪತ್ತೆ, 2 ಸಾವು

Nagaraja AB

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 484 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,55,230ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 822 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 40,10,109ಕ್ಕೆ ಏರಿಕೆಯಾಗಿದೆ. ಇನ್ನು 4872 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 40, 207ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 276 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಒಟ್ಟಾರೇ ಸೋಂಕಿತರ ಸಂಖ್ಯೆ 18,66, 836ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

SCROLL FOR NEXT