ರಾಜ್ಯ

ಶಿಕ್ಷಕರ ದಿನವೇ ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ನಿಧನ

Vishwanath S

ಕಾರವಾರ: ಮಾಜಿ ಸಚಿವ ಪ್ರಭಾಕರ್ ರಾಣೆ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

1983ರಿಂದ ಮೂರು ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಕಾರವಾರ-ಜೊಯಿಡಾ ಕ್ಷೇತ್ರದ ಶಾಸಕರಾಗಿದ್ದ ಅವರು 1993ರಲ್ಲಿ ವೀರಪ್ಪ ಮೊಯ್ಲಿ ಸಚಿವ ಸಂಪುಟದಲ್ಲಿ ಶಿಕ್ಷಣ ಮತ್ತು ಸಾಕ್ಷರತೆ ಶಿಕ್ಷಣ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಇನ್ನು 1996ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರು ವಸಂತ್ ಅಸ್ನೋಟಿಕರ್ ವಿರುದ್ದ ಸೋಲು ಅನುಭವಿಸಿದ್ದರು. ನಂತರ ಜೆಡಿಎಸ್ ಸೇರಿ ಅದೃಷ್ಟ ಪರೀಕ್ಷೆಗಿಳಿದ್ದಿದ್ದ ಅವರು ಮತ್ತೆ ಸೋಲು ಕಂಡಿದ್ದರಿಂದ ರಾಜಕೀಯದಿಂದ ದೂರ ಸರಿದಿದ್ದರು. 

ಸಿದ್ಧರದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಆರಂಭಿಸಿದ್ದರು. ಕಾರವಾರ ಜೊಯಿಡಾ ತಾಲೂಕಿನಲ್ಲಿ ಶಾಲಾ-ಕಾಲೇಜು ಸ್ಥಾಪಿಸಿ ಬಡ ಕುಟುಂಬಗಳ ಮಕ್ಕಳು ವಿದ್ಯಾಭ್ಯಾಸ ಪಡೆಯುವಂತ ಅವಕಾಶ ಸೃಷ್ಟಿಸಿದರು. 

SCROLL FOR NEXT